ಭಟ್ಕಳ: ರಾಜ್ಯ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ರಾಜ್ಯದ್ಯಂತ ಮಾರ್ಚ 8 ರಂದು ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಭಟ್ಕಳ ತಾಲೂಕಿನಲ್ಲೂ ಸಹ ಲೋಕ್ ಅದಾಲತ್ ಕಾರ್ಯಕ್ರಮ ನಡೆಯುತ್ತಿದ್ದು, ಸುಮಾರು 1500 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಇತ್ಯರ್ಥವಾಗುವ ಸಾಧ್ಯತೆ ಇದೆ ಎಂದು ಹಿರಿಯ ನ್ಯಾಯಾದೀಶ ಹಾಗೂ ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಕಾಂತ ಕುರಣಿ ಹೇಳಿದರು.
ತಾಲೂಕಿನ ನ್ಯಾಯಾಲಯದ ಸಂಕಿರ್ಣದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ ಲೋಕ ಅದಾಲತ್ ನಲ್ಲಿ 1146 ಪ್ರಕರಣಗಳನ್ನು ಸಾರ್ವಜನಿಕರು ಹಾಗೂ ವಕೀಲರ ಸಹಕಾರದಿಂದ ಇತ್ಯರ್ಥಪಡಿಸಲಾಗಿತ್ತು. ಲೋಕ ಅದಾಲತ್ ಎಂದರೆ ಕಕ್ಷಿದಾರರೆ ಪರಸ್ಪರ ರಾಜಿಮಾಡಿಕೊಂಡು ಪ್ರಕರಣವನ್ನು ಇತ್ಯರ್ಥಪಡಿಸುವುದಾಗಿದ್ದು, ಇಲ್ಲಿ ಯಾರು ಗೆದ್ದಂತೆ ಅಥವಾ ಸೋತಂತೆ ಭಾವನೆ ಮೂಡುವುದಿಲ್ಲ ಬದಲಾಗಿ ಇಬ್ಬರೂ ಗೆದ್ದಂತಾಗುತ್ತದೆ.
ಲೋಕ್ ಅದಾಲತ್ ಮೂಲಕ ಇತ್ಯರ್ಥಪಡಿಸಲಾದ ಸಿವಿಲ್ ಪ್ರಕರಣದಲ್ಲಿ ನ್ಯಾಯಾಲಯದ ಶುಲ್ಕವನ್ನು ಹಿಂದಿರುಗಿಸಲಾಗುತ್ತದೆ. ಕಕ್ಷಿದಾರರಿಗೆ ಸಮಯ ಹಾಗೂ ಹಣವು ಕೂಡ ಉಳಿತಾಯವಾಗುವಂತಾಗುತ್ತದೆ. ಈ ಸಂಬoದ ವಕೀಲರ ಸಂಘ, ಪೋಲಿಸ್ ಇಲಾಖೆಯೊಂದಿಗೆ, ಬ್ಯಾಂಕಿoಗ್ ಸಂಸ್ಥೆಗಳೊoದಿಗೆ ಸಭೆಯನ್ನು ನಡೆಸಲಾಗಿದ್ದು ಅವರು ಪೂರಕವಾಗಿ ಸಹಕರಿಸಿದ್ದು ಸಾರ್ವಜನಿಕರು ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಲೋಕ್ ಅದಾಲತ್ ನ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಳ್ಳುವಂತೆ ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ತಾಲೂಕಾ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ದೀಪಾ ಅರಳಗುಂಡಿ ಹೆಚ್ಚುವರಿ ನ್ಯಾಯಾಧೀಶೆ ಧನವತಿ ಇದ್ದರು.
ವಿಸ್ಮಯ ನ್ಯೂಸ್, ಈಶ್ವರ ನಾಯ್ಕ ಭಟ್ಕಳ