ಅಂಕೋಲಾ: KLE ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ಬಿತ್ತಿಪತ್ರ ತಯಾರಿಕೆ ಸ್ಪರ್ಧಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಯಾವುದೇ ವಿಷಯವನ್ನು ಸಂಪೂರ್ಣವಾಗಿ ಅವಲೋಕಿಸಿ ಬೊಧಿಸಿದಾಗ ಮಾತ್ರ ವಿಷಯದ ಮೇಲೆ ಪ್ರಭುತ್ವ ಸಾಧಿಸಲು ಸಾಧ್ಯವಿದೆ. ವಿಜ್ಞಾನ ಚಿಂತನಾತ್ಮಕ ವಿಷಯವಾಗಿದ್ದು ಬೋಧನೆಯ ಸಂದರ್ಭದಲ್ಲಿ ವೈಜ್ಞಾನಿಕ ಅರಿವು ಅತ್ಯಗತ್ಯ ಎಂದು ಸರಕಾರಿ ಪ್ರಾಥಮಿಕ ಶಾಲೆ ಬೊಗ್ರಿಬೈಲ್ ನ ಸಹ ಶಿಕ್ಷಕಿ ಭಾಗ್ಯಲಕ್ಷ್ಮಿ ನಾಯಕ ಹೇಳಿದರು.
ಕೆ.ಎಲ್. ಇ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ಬಿತ್ತಿಪತ್ರ ತಯಾರಿಕೆ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಜ್ಞಾನದಿಂದ ಲೊಪದೋಷಗಳನ್ನು ತಿದ್ದಿಕೊಂಡು ಯಶಸ್ವಿ ಶಿಕ್ಷಕರಾಗಲು ಸಾಧ್ಯ ಎಂದರು. ಕಾಲೇಜಿನ ಪ್ರಾಚಾರ್ಯ ವಿನಾಯಕ ಹೆಗಡೆ ಸಭಾಧ್ಯಕ್ಷತೆ ವಹಿಸಿ ಮಾತನಾಡಿ ವಿಜ್ಞಾನ ದಿನಾಚರಣೆಯಂತ ಕಾರ್ಯಕ್ರಮಗಳು ಕೇವಲ ಸಾಂಕೇತಿಕ ಆಚರಣೆ ಆಗದೇ ಮೂಡನಂಬಿಕೆ ತೊಡೆದು ಹಾಕಿ ವೈಜ್ಞಾನಿಕ ಮನೋಭಾವ ಬೆಳೆಸುವ ವೇದಿಕೆಯಾಗಬೇಕಿದೆ ಎಂದರು.. ಕೆ ಎಲ್ ಇ ಶಿಕ್ಷಣ ಮಹಾವಿದ್ಯಾಲಯದ ಪ್ರ ಶಿಕ್ಷಣಾರ್ಥಿಗಳು , ಬೋಧಕ ಬೋಧಕೇತರ ಸಿಬ್ಬಂದಿಗಳಿದ್ದರು.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ