ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಅಪಾರ ಹಾನಿ ಸಂಭವಿಸಿದೆ. ಹೌದು ಸನವಳ್ಳಿ ಗ್ರಾಮದ ನಾಗರಾಜ ಎಂಬವರ ಮನೆಯ ಹಿತ್ತಲಿನಲ್ಲಿ ಭತ್ತದ ಹುಲ್ಲಿನ ನಾಲ್ಕು ನೂರು ರೂಲರ್ ಪಿಂಡಿಗಳ ಬಣವೆ ಹಾಕಲಾಗಿತ್ತು. ಆದರೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಅಪಾರ ಪ್ರಮಾಣದ ಹುಲ್ಲಿನ ಪಿಂಡಿಗಳು ಸುಟ್ಟು ಕರಕಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದವರು ಬೆಂಕಿ ನಂದಿಸಿ ಹೆಚ್ಚಿನ ಪ್ರಮಾಣದ ಹಾನಿಯನ್ನು ತಪ್ಪಿಸಿದ್ದಾರೆ. ಈ ಅವಘಡದಿಂದಾಗಿ ಜಾನುವಾರುಗಳಿಗೆ ಮೇವು ಇಲ್ಲದಂತಾಗಿದ್ದು, ಸುಮಾರು ಒಂದು ಲಕ್ಷ ರೂಪಾಯಿ ಹಾನಿ ಸಂಭವಿಸಿದೆ.
ವಿಸ್ಮಯ ನ್ಯೂಸ್, ಮುಂಡಗೋಡು












