ಹೊನ್ನಾವರ: ವಿಜ್ಞಾನವು ಜ್ಞಾವನ್ನು ಹೆಚ್ಚುತ್ತದೆ. ಇದು ಪ್ರಗತಿಯ ಸಂಕೇತವಾಗಿದೆ, ಮೂಢನಂಬಿಕೆಯನ್ನು ಹೋಗಲಾಡಿಸುತ್ತದೆ ಎಂದು ವಿಶ್ರಾಂತ ಪ್ರಾಚಾರ್ಯರು ಹಾಗೂ ಸಂಸ್ಥೆಯ ಗೌರವಾಧ್ಯಕ್ಷರು ಆದ ವಿ ಜಿ ಹೆಗಡೆ ಗುಡ್ಗೆಯವರು ನುಡಿದರು. ಅವರು ಕವಲಕ್ಕಿಯ ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಇದು ವೈಜ್ಞಾನಿಕ ಯುಗವಾಗಿದೆ. ವೈಚಾರಿಕತೆಯನ್ನು ನಾವು ಮೈಗೂಡಿಸಿಕೊಳ್ಳಬೇಕಾಗುತ್ತದೆ,ವಿದ್ಯಾರ್ಥಿಗಳು ವಿಜ್ಞಾನಿಗಳಾಗುವ ಗುರಿಯನ್ನು ಹೊಂದಿರಬೇಕು ಎಂದು ಹೆಗಡೆಯವರು ನುಡಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಉಮೇಶ ಹೆಗಡೆಯವರು ಮಾತನಾಡಿ ವೈಚಾರಿಕತೆಯನ್ನು ಅಳವಡಿಸಿಕೊಂಡ ದೇಶವು ಪ್ರಗತಿ ಹೊಂದಲು ಸಾಧ್ಯ, ನಾವು ನಮ್ಮ ಜೀವನದಲ್ಲಿ ವೈಚಾರಿಕತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಆಡಳಿತಾಧಿಕಾರಿ ಎಂ ಎಸ್ ಹೆಗಡೆ ಗುಣವಂತೆಯವರು ಮಾತನಾಡಿ ವಿಜ್ಞಾನ ಮತ್ತು ತಂತ್ರಜ್ಞಾನದ ಫಲವಾಗಿಯೇ ಇಂದು ನಾವು ವಿಶ್ವದ ಯಾವುದೇ ಮೂಲೆಯಲ್ಲಿ ಜರುಗಿದ ಘಟನೆಯನ್ನು ಕ್ಷಣಮಾತ್ರದಲ್ಲಿ ತಿಳಿಯಬಹುದಾಗಿದೆ. ನಮ್ಮ ಶಾಲೆಯಲ್ಲಿ ಜರುಗಿದ ವಿಜ್ಞಾನ ವಸ್ತು ಪ್ರದರ್ಶನವು ಪ್ರಗತಿಯ ಸಂಕೇತವಾಗಿದೆ. ಇದು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸುತ್ತದೆ ಎಂದರು.
ವಿಸ್ಮಯ ನ್ಯೂಸ್, ಹೊನ್ನಾವರ