Important

ಅಕ್ರಮ ಗೋಸಾಗಾಟ ಖಂಡಿಸಿ ಮನವಿ : ವಿಶ್ವ ಹಿಂದೂ ಪರಿಷತ್ ಭಟ್ಕಳ ಘಟಕದ ಸಂಪೂರ್ಣ ಬೆಂಬಲ

Share

ಭಟ್ಕಳ: ಇತ್ತಿಚೆಗೆ ಭಟ್ಕಳ ತಾಲೂಕಿನಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಗೋಹತ್ಯೆಯಂತಹ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತಿದ್ದು. ಈ ನಿಟ್ಟಿನಲ್ಲಿ ಅಕ್ರಮ ಗೋ ಸಾಗಾಟ ಖಂಡಿಸಿ ಭಟ್ಕಳ ತಾಲೂಕಾ ಹಿಂದು ಜಾಗರಣ ವೇದಿಕೆಯ ನೇತೃತ್ವದಲ್ಲಿ ಮಾರ್ಚ್ 17 ರಂದು ಸಹಾಯಕ ಆಯುಕ್ತರಿಗೆ ಮನವಿ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಭಟ್ಕಳ ಘಟಕವು ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿ ಪತ್ರಿಕಾ ಪ್ರಕಟಣೆ ನೀಡಿದೆ.

ಭಟ್ಕಳದಲ್ಲಿ ಅಕ್ರಮ ಗೋಸಾಗಾಟ ಹೆಚ್ಚುತ್ತಿರುವುದು ಆತಂಕಕಾರಿ ವಿಚಾರವಾಗಿದೆ. ದಿನಂಪ್ರತಿ ಅಕ್ರಮ ಜಾನುವಾರುಗಳ ಸಾಗಾಟ ಪತ್ತೆಯಾಗುತ್ತಿದ್ದು,ಈ ಬಗ್ಗೆ ಸೂಕ್ತ ಕ್ರಮ ಆಗಬೇಕು. ಚೆಕ್ ಪೋಸ್ಟಗಳನ್ನು ಮತ್ತಷ್ಟು ಬಿಗುಗೊಳಿಸಬೇಕು. ರಾತ್ರಿ ವೇಳೆ ಇಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಜಾನುವಾರುಗಳನ್ನು ಅಕ್ರಮವಾಗಿ ಮತ್ತು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದು, ಇದು ತೀರಾ ಖಂಡನೀಯ. ಅಕ್ರಮವಾಗಿ ಯಾವುದೇ ವ್ಯಕ್ತಿಗಳು ಜಾನುವಾರು ಸಾಗಾಟ ಮಾಡಿದರೂ ಅಂಥವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆ ಮುಂದಾಗಬೇಕು.

ಗೋವುಗಳನ್ನು ಹಿಂದೂಗಳು ಪೂಜಿಸುತ್ತಿದ್ದು, ಗೋವುಗಳ ಹತ್ಯೆ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ತರುವುದು ಸರಿಯಲ್ಲ. ಭಟ್ಕಳದಲ್ಲಿ ಪದೇ ಪದೇ ಅಕ್ರಮ ಜಾನುವಾರು ಸಾಗಾಟ ನಡೆಯುತ್ತಿದ್ದು ಇದನ್ನು ತಡೆಯುವ ಕೆಲಸ ಆಗಬೇಕು. ಅಕ್ರಮ ಜಾನುವಾರು ಸಾಗಾಟದ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸುತ್ತೇವೆ. ಜಾನುವಾರುಗಳನ್ನು ತುಂಬಿಕೊಂಡು ಹೊರಗಿನಿಂದ ಬರುವ ವಾಹನಗಳು ಮತ್ತು ಅದನ್ನು ತರುವ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತಾಗಬೇಕು. ಇದಕ್ಕೆ ನಮ್ಮ ಸಂಘಟನೆಯ ಸಂಪೂರ್ಣ ಬೆಂಬಲವಿದ್ದು, ಅಂದು ಸಮಸ್ತ ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಕ್ರಮ ಗೋವು ಸಾಗಾಟವನ್ನು ಬಲವಾಗಿ ಖಂಡಿಸಬೇಕು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.

ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...