ಕಾರವಾರ: ಜೂನ್ ತಿಂಗಳಿನಲ್ಲಿ ಆರಂಭವಾಗುವ ಮುಂಗಾರು ಮಳೆಯ ಪ್ರಮಾಣವು ವಾಡಿಕೆಗಿಂತ ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ದೇಶದಾದ್ಯಂತ ಶೇ. 106 ರಷ್ಟು ಮಳೆಯಾಗಲಿದ್ದು, 87 ಸೆಂಟಿಮೀಟರ್‌ನoತೆ ದೀರ್ಘಾವಧಿಯ ಸರಾಸರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಭಾರೀ ಭಾರತಕ್ಕೆ ಮುಂಗಾರು 2 ವಾರ ಮುಂಚಿತವಾಗಿ ಆಗಮಿಸಿದೆ. ಅದರಲ್ಲೂ ಕರ್ನಾಟಕಕ್ಕೆ ಜೂನ್ ಮೊದಲ ವಾರದಲ್ಲಿ ಆಗಮಿಸಿಬೇಕಿದ್ದ ಮುಂಗಾರು ಮಳೆಯು ಮೇ ಕೊನೆಯ ವಾರದಲ್ಲಿ ಆಗಮಿಸಿದೆ.
ಇನ್ನೂ 2 ರಿಂದ 5 ದಿನಗಳಲ್ಲಿ ಪರಿಪೂರ್ಣ ಸ್ಥಿತಿಯಲ್ಲಿ ಮುಂಗಾರು ಮಳೆಯು ಆರಂಭವಾಗುತ್ತದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜೂನ್ ಮೊದಲವಾರದಲ್ಲಿ ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನಿಡಿದೆ. ಈಗಾಗಲೇ ವಾಯುಭಾರ ಕುಸಿತದಿಂದಾಗಿ ರಾಜ್ಯ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಅಧಿಕವಾಗಿದೆ. ಮೇ 30 ರ ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಪ್ರಮಾಣದ ಮಳೆ ಸುರಿಯುವ ಸಾಧ್ಯತೆ ಇದೆ .
ಬ್ಯುರೋ ರಿಪೋರ್ಟ ವಿಸ್ಮಯ