Big News

ಗಾಳಿ ಮಳೆಗೆ ಕಾರಿನ ಮೇಲೆ ಬಿದ್ದ ಬೃಹತ್ತ ಗಾತ್ರದ ಮರ : ಕಾರಿನಲ್ಲಿ ಸಿಲುಕಿ ಮಹಿಳೆ ಸಾವು

Share

ಅಂಕೋಲಾ: ಗಾಳಿ ಮಳೆಯ ರಭಸಕ್ಕೆ ಬೃಹತ್ ಮರ ಒಂದು ಉರುಳಿ , ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಜಖಂಗೊoಡು, ಕಾಲಿನಲ್ಲಿದ್ದ ಮಹಿಳೆ ಮೃತಪಟ್ಟ ಧಾರುಣ ಘಟನೆ ಜಿಲ್ಲಾ ಕೇಂದ್ರ ಕಾರವಾರದ ಪಿಕಳೆ ರಸ್ತೆಯಲ್ಲಿ ಸಂಭವಿಸಿದೆ. ಹತ್ತಿರದ ಆಸ್ಪತ್ರೆಗೆ ಹೋಗಿದ್ದ ತಮ್ಮ ಸೊಸೆಯ ಬರುವಿಕೆಗೆ ಕಾದು,ಈ ಮಹಿಳೆ ರಸ್ತೆ ಅಂಚಿಗೆ ನಿಲ್ಲಿಸಿದ್ದ ತಮ್ಮ ಕುಟುಂಬದ ಕಾರಿನ ಒಳಗಡೆ ಕುಳಿತಿದ್ದರು. ದುರದೃಷ್ಟವಶಾತ್ ಇದೇ ವೇಳೆ, ಇವರು ಕುಳಿತಿದ್ದ ಕಾರಿನ ಮೇಲೆ ಭಾರೀ ಗಾತ್ರದ ಮರವೊಂದು ಬಿದ್ದು ಈ ದುರಂತ ಸಂಭವಿಸಿದೆ. ಮರ ಬಿದ್ದ ಪರಿಣಾಮ ಕಾರು ಮರದ ರಂಬೆ ಕೊಂಬೆಗಳ ನಡುವೆ ಸಿಲುಕಿ ಜಖಂ ಗೊಂಡಿದ್ದು,ರಸ್ತೆ ಸಂಚಾರಕ್ಕೂ ತೊಡಕಾಗಿತ್ತು, ಇದರಿಂದ ಜಖಂ ಗೊಂಡ ಕಾರಿನಲ್ಲಿ ಸಿಲುಕಿದ್ದ ಮಹಿಳೆಯ ರಕ್ಷಣೆ ಕೆಲಸ ಸವಾಲಿನದಾಗಿತ್ತು.

ನಗರಸಭೆಯ ಜೆಸಿಬಿ ಬಳಸಿ ಮತ್ತು ಮರ ಕಟಾವು ಯಂತ್ರ ಬಳಸಿ ತ್ವರಿತ ಕಾರ್ಯಾಚರಣೆ ಕೈಗೊಳ್ಳಲಾಯಿತಾದರೂ,ಜೀವ ರಕ್ಷಣೆ ಸಾಧ್ಯವಾಗಿರಲಿಲ್ಲ. ರವಿವಾರ ನಗರದಲ್ಲಿ ಸಂತೆಯೂ ಇದ್ದು ಜನ ನಿಬಿಡ ಪ್ರದೇಶದಲ್ಲಿ ಮರ ಬಿದ್ದರಿಂದ ಕೆಲಕಾಲ ಆತಂಕದ ವಾತಾವರಣ ಕಂಡು ಬಂತು. ಆದರೂ ಅದೃಷ್ಟವಶಾತ್ ಕೆಲ ವ್ಯಾಪಾರಸ್ಥರು ಸೇರಿ ಇತರರು ಸಂಭವನೀಯ ಭಾರೀ ಅಪಾಯದಿಂದ ಪಾರಾಗಿದ್ದಾರೆ.ಮೃತ ದುರ್ದೈವಿ ಮಹಿಳೆ ಮಲ್ಲಾಪುರದವರು ಎನ್ನಲಾಗುತ್ತಿದ್ದು ,ಒಟ್ಟಾರೆ ಈ ದುರ್ಘಟನೆ ಕುರಿತಂತೆ ಹೆಚ್ಚಿನ ಮತ್ತು ಅಧಿಕೃತ ಮಾಹಿತಿಗಳು ತಿಳಿದು ಬರಬೇಕಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ನಡೆಯಲಿದೆ....

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಸ್ವಾತಂತ್ರ‍್ಯೋತ್ಸವದ ಸಂಭ್ರಮಕ್ಕೆ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಭರ್ಜರಿ ಆಫರ್; ಶೇ.70ರಷ್ಟು ರಿಯಾಯಿತಿ

ಕುಮಟಾ: ಸ್ವಾತಂತ್ರ‍್ಯೋತ್ಸವದ ಅಂಗವಾಗಿ ತರಂಗ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ ಗ್ರಾಹಕರಿಗಾಗಿ ವಿಶೇಷ ‘ಫ್ರೀಡಂ ಫೆಸ್ಟಿವಲ್’ ಆಫರ್...

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ...

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ...

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...