ಶಿರಸಿ: ಕಳೆದ 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿತನನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಜಯಪುರದ ಸಂಜಯ್ ಎಂ ಗಜಕೋಶ ಬಂಧಿತ ಆರೋಪಿತ. ಈತ ಕಳೆದ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.
ನ್ಯಾಯಾಲಯವು ಈತನ ವಿರುದ್ಧ ವಾರೆಂಟ್ ಆದೇಶ ಹೊರಡಿಸಿತ್ತು. ಪತ್ತೆಗೆ ತನಿಖೆ ಕೈಗೊಂಡ ಪೊಲೀಸರು ವಿಜಯಪುರ ಜಿಲ್ಲೆಯಲ್ಲಿ ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ವಿಸ್ಮಯ ನ್ಯೂಸ್, ಶಿರಸಿ