ಭಟ್ಕಳ: ಶ್ರೀ ಕಂಚಿನ ದುರ್ಗಾ ಪರಮೇಶ್ವರಿ ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆಗಸ್ಟ್ 28ರ ಸಂಜೆ 7 ಗಂಟೆಯಿoದ ಆಗಸ್ಟ್ 29ರ ಬೆಳಿಗ್ಗೆ 7 ಗಂಟೆಯ ನಡುವಿನ ವೇಳೆಯಲ್ಲಿ, ಅಪರಿಚಿತ ಕಳ್ಳರು ದೇವಸ್ಥಾನದ ಬಾಗಿಲಿನ ಬೀಗ ಮುರಿದು ಒಳನುಗ್ಗಿ, ಹುಂಡಿಯ ಬೀಗ ಒಡೆದು ಅದರಲ್ಲಿದ್ದ ಹಣವನ್ನು ಕಳವು ಮಾಡಿದ್ದರು. ಈ ಕುರಿತು ಭಟ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಂಧಿತರ ವಿವರ
ತನಿಖೆ ಕೈಗೊಂಡ ಪೊಲೀಸರು ಭಟ್ಕಳದ ಕಾರಗದ್ದೆಯ ದರ್ಶನ್ ಮಂಜುನಾಥ ನಾಯ್ಕ ಮತ್ತು ಶಿರಾಲಿಯ ನಾರಾಯಣ ನಾಗಪ್ಪ ಗುಡಿಹಿತ್ತಲ ಅವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮನೆಯ ಮೆಟ್ಟಿಲುಗಳ ಮೇಲೆ ಚಿರತೆ ಓಡಾಟ : ಗ್ರಾಮಸ್ಥರಲ್ಲಿ ಆತಂಕ
ಕಳ್ಳತನಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನ , ಹಣ ಮತ್ತು ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ತನಿಖೆ ಹಾಗೂ ಆರೋಪಿಗಳ ಪತ್ತೆಯಲ್ಲಿ ತೊಡಗಿದ್ದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕಾರ್ಯಕ್ಕೆ ಜಿಲ್ಲಾಧಿಕಾರಿ ದೀಪನ್ ಎಂ.ಎನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ