ಚುಟುಕು ಬ್ರಹ್ಮ ದಿನಕರ ದೇಸಾಯಿ ಜನ್ಮದಿನಾಚರಣೆ ಹೊನ್ನಾವರದಲ್ಲಿ ನಡೆದ ಕಾರ್ಯಕ್ರಮ
Important

ಚುಟುಕು ಬ್ರಹ್ಮ ದಿನಕರ ದೇಸಾಯಿ ಜನ್ಮದಿನಾಚರಣೆ

Share

ಹೊನ್ನಾವರ: ಚುಟುಕು ಬ್ರಹ್ಮ ದಿನಕರ ದೇಸಾಯಿ ಜನ್ಮದಿನಾಚರಣೆ ಹೊನ್ನಾವರ ತಾಲೂಕಿನ ಕಾಸರಕೋಡದ ಜನತಾ ವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಸಹಯೋಗದಲ್ಲಿ ನಡೆಯಿತು.

ಉತ್ತರ ಕನ್ನಡದ ಧ್ರುವತಾರೆ ದಿನಕರ ದೇಸಾಯಿ

ಕಾರ್ಯಕ್ರಮ ಉದ್ಘಾಟಿಸಿದ ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ಎಸ್.ಟಿ.ಹೊರ್ಟಾ ಮಾತನಾಡಿ, ಸಮಾಜದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮಾತ್ರವಲ್ಲ ವಿವಿಧ ಕ್ಷೇತ್ರಗಳಲ್ಲಿ ಅವರ ಕೊಡುಗೆ ಅಪಾರವಾದುದು. ಅವರು ಕಾರ್ಮಿಕ ಮುಖಂಡರಾಗಿ ಕಾರ್ಮಿಕರಿಗೆ ನ್ಯಾಯ ಒದಗಿಸಿಕೊಟ್ಟಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಸೇವೆಯನ್ನು ನೀಡಿದ್ದಾರೆ. ಹಲವಾರು ಕೃತಿಗಳನ್ನು ರಚಿಸಿ ಜನಸೇವೆಯನ್ನು ಮಾಡಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಎಚ್.ಎಸ್.ಗೌಡ ಮಾತನಾಡಿ, ಚುಟುಕು ಬ್ರಹ್ಮ ಎಂದು ಪ್ರಸಿದ್ಧಿ ಪಡೆದಿರುವ ದಿನಕರ ದೇಸಾಯಿ ಅವರು ಸಾಹಿತ್ಯದ ಜೊತೆಗೆ ಹಲವು ಕ್ಷೇತ್ರಗಳಲ್ಲಿ ಬ್ರಹ್ಮ ಎನಿಸಿಕೊಂಡಿದ್ದಾರೆ. ಸರಳ ಜೀವನದಿಂದ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರ ಜನ್ಮದಿನಾಚರಣೆಯನ್ನು ಸಾಹಿತಿಗಳು, ಶಿಕ್ಷಕರು, ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಸಂಭ್ರಮದಿoದ ಆಚರಿಸಲಾಗುತ್ತಿದೆ ಎಂದರು.

ಸಾಹಿತಿ ಎಚ್.ಎಸ್.ಗುನಗ ಮಾತನಾಡಿ ದಿನಕರ ದೇಸಾಯಿ ಅವರು ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯನ್ನು ನೀಡಿ ಉತ್ತರ ಕನ್ನಡ ಜಿಲ್ಲೆಯ ಧ್ರುವತಾರೆಯಾಗಿದ್ದಾರೆ. ನಿಜವಾದ ಧರ್ಮ ಎಂದರೆ ಶಿಕ್ಷಣ; ಶಿಕ್ಷಣದಿಂದ ಎಲ್ಲವನ್ನೂ ಸಾಧಿಸಬಹುದು ಎಂಬುದನ್ನು ಅವರು ತೋರಿಸಿದ್ದಾರೆ ಎಂದು ಹೇಳಿದರು.

ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಚ್.ಎಂ.ಮಾರುತಿ, ನಿವೃತ್ತ ಮುಖ್ಯಾಧ್ಯಾಪಕ ಎಂ.ಎಚ್.ನಾಯ್ಕ, ಗ್ರಂಥಪಾಲಕ ಮಂಜುನಾಥ ಗೌಡ, ಕ.ಸಾ.ಪ ಕೋಶಾಧ್ಯಕ್ಷ ನಾರಾಯಣ ಹೆಗಡೆ, ಸದಸ್ಯರಾದ ಶುಭಾ ವಿಷ್ಣು ಸಭಾಹಿತ, ಎಂ.ಡಿ.ಹರಿಕಾoತ, ಶಿಕ್ಷಕರಾದ ಸಬಿತಾ ನರೋನ್ಹಾ, ಸೌಮ್ಯ ಹೆಗಡೆ, ರಾಜೇಶ ಕಾಕಡೆ, ಶಿವಣ್ಣ ಸವದಿ ಹಾಜರಿದ್ದರು.
ಈ ಸಂದರ್ಭದಲ್ಲಿ ದಿನಕರ ದೇಸಾಯಿ ಜನ್ಮದಿನಾಚರಣೆ ಪ್ರಯುಕ್ತ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ARE YOU A TOP SALES PERFORMER? TARANGA IS HIRING – ONLY 4 VACANCIES

Taranga Electronics & Furniture, one of Uttara Kannada’s most reputed retail chains, is looking for dynamic Sales Executives to join our growing team....

11 ತಾಲೂಕುಗಳಲ್ಲಿ ಉದ್ಯೋಗಾವಕಾಶ; 15,600 ರಿಂದ 21 ಸಾವಿರ ವರೆಗೆ ವೇತನ

ಉತ್ತರ ಕನ್ನಡ: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲೊಂದು ಉತ್ತಮ ಅವಕಾಶ. ಸ್ವತಂತ್ರ ಮೈಕ್ರೋಪಿನ್ ಲಿಮಿಟೆಡ್ ಎಂಬ ಬ್ಯಾಂಕೇತರ ಕಿರು ಹಣಕಾಸು ಸಂಸ್ಥೆ (NBFC-MFI)ಯಲ್ಲಿ ಕ್ಷೇತ್ರ ಅಧಿಕಾರಿ (Field Officer) ಹುದ್ದೆಗೆ ಅರ್ಹ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಕುಮಟಾ: ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅತ್ಯಂತ ವಿಜೃಂಭಣೆಯಿoದ ನೆರವೇರಿತು....

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...