ಅಂಕೋಲಾ: ತಾಲೂಕಿನ ಅಗ್ರಗೋಣ ಗ್ರಾಮದ (ಲಕ್ಷ್ಮೀ ಮನೆ ) ನಿವಾಸಿ, ಹಾಗೂ ಬೇಲೇಕೇರಿ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಮಂಜುನಾಥ್ ವೆಂಕಣ್ಣ ನಾಯಕ (61) ಅವರು ನಿಧನರಾಗಿದ್ದಾರೆ.
ಇಂಗ್ಲಿಷ್ ಶಿಕ್ಷಕರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಅವರು ತಮ್ಮ ಸರಳ ವ್ಯಕ್ತಿತ್ವ, ಬದ್ಧತೆ ಹಾಗೂ ವಿದ್ಯಾರ್ಥಿ ಸ್ನೇಹಿ ಬೋಧನಾ ಶೈಲಿಯಿಂದ ಗುರುತಿಸಿಕೊಂಡಿದ್ದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಇಂಗ್ಲಿಷ್ ವಿಷಯದ ಬಗ್ಗೆ ಆತ್ಮವಿಶ್ವಾಸ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು, ನೂರಾರು ವಿದ್ಯಾರ್ಥಿಗಳ ಪ್ರೀತಿಯ ಶಿಕ್ಷಕರಾಗಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಅವರ ಸೇವೆ ಹಾಗೂ ವಿದ್ಯಾರ್ಥಿಗಳೊಂದಿಗೆ ಹೊಂದಿದ್ದ ಆತ್ಮೀಯ ಸಂಬಂಧವು ಅವರನ್ನು ವಿಶೇಷ ಶಿಕ್ಷಕರನ್ನಾಗಿ ಮಾಡಿತ್ತು.
ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಶಿಕ್ಷಣ ಕ್ಷೇತ್ರದ ಗಣ್ಯರು, ಹಳೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಂಜುನಾಥ ನಾಯಕ ಅವರ ಅಂತ್ಯಸಂಸ್ಕಾರವು ಜೂನ್ 6ರಂದು ಶನಿವಾರ ಬೆಳಿಗ್ಗೆ 9.30 ಗಂಟೆಗೆ ಅಗ್ರಗೋಣ ಗ್ರಾಮದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ













