Big News

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

Share

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ನಡೆಯಲಿದೆ.

ಪೂರ್ವಭಾವಿ ಸುದ್ದಿಗೋಷ್ಠಿ

ಈ ಕುರಿತು ಕುಮಟಾದ ಖಾಸಗೀ ಹೋಟೆಲ್ ನಲ್ಲಿ ಪೂರ್ವಭಾವಿ ಸುದ್ದಿಗೋಷ್ಠಿ ನಡೆಯಿತು. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್, ಕುಮಟಾದ ಅಧ್ಯಕ್ಷರಾದ ಗಣಪತಿ ಎಂ. ಅಡಿಗುಂಡಿ ಅಡಿಗುಂಡಿ ಅವರು ಚುಟುಕು ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್, ಕುಮಟಾ ಘಟಕದ 5ನೇ ವರ್ಷದ ಸವಿನೆನಪಿನ ಅಂಗವಾಗಿ, ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ಉತ್ತರ ಕನ್ನಡ ಜಿಲ್ಲಾ 9ನೇ ಹಾಗೂ ಕುಮಟಾ ತಾಲೂಕು 5ನೇ ಜಂಟಿ ಚುಟುಕು ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ.

ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ ಶಿಕ್ಷಕ, ಸಾಹಿತಿ, ಕವಿ, ನಿರೂಪಕ ಹಾಗೂ ಸಂಘಟಕರಾದ ಡಾ. ರವೀಂದ್ರ ಭಟ್ಟ ಸೂರಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದರು.

ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್, ಕುಮಟಾದ ಕಾರ್ಯದರ್ಶಿಗಳಾದ ಉದಯ ಮಡಿವಾಳ ಅವರು ಮಾತನಾಡಿ ಸಮ್ಮೇಳನದಲ್ಲಿ ವಿವಿಧ ಸಾಹಿತ್ಯಕ ಗೋಷ್ಠಿಗಳು, ಕೃತಿ ಲೋಕಾರ್ಪಣೆ ಕಾರ್ಯಕ್ರಮಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಸಾಧಕ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ವಾಲೀಬಾಲ್ ತಂಡದ ಮಾಜಿ ನಾಯಕರಾದ ನಾಗರಾಜ ಹೆಗಡೆ, ರಾಷ್ಟಿçÃಯ ವಾಲೀಬಾಲ್ ಆಟಗಾರರಾದ ಗೌರೀಶ ಶೆಟ್ಟಿ, ಮಹಾಬಲೇಶ್ವರ ಹೆಗಡೆಕರ್, ಯಕ್ಷಗಾನ ಕಲಾವಿದರಾದ ಕೃಷ್ಣ ಯಾಜಿ ಬಳ್ಕೂರು, ಮಾಜೀ ಸೈನಿಕರಾದ ಸಚೀನ್ ನಾಯ್ಕ, ಸಾಹಿತ್ಯ ಕ್ಷೇತ್ರದಲ್ಲಿ ಕರ್ನಾಟಕ ಬುಕ್ ಆಪ್ ರೆಕಾರ್ಡ ಸಾಧನೆ ಮಾಡಿದ ದಿನೇಶ ಅಮ್ಮೀನಳ್ಳಿ, ಶಿಕ್ಷಣ ಕೇತ್ರದ ಸಾಧಕರಾದ ಸಿ.ಪಿ. ಶಿವಚಂದ್ರ ಅವರನ್ನು ಸನ್ಮಾನಿಸಲಾಗುವದು ಎಂದರು,

ಸುದಿಗೋಷ್ಠಿಯಲ್ಲಿ ಮಾಜೀ ಸೈನಿಕರಾದ ಪ್ರಕಾಶ ಮಡಿವಾಳ, ದೇವಿದಾಸ ಮಡಿವಾಳ. ಅನಿಲ್ ನಾಯ್ಕ, ನವೀನ್ ನಾಯ್ಕ, ರಾಮಚಂದ್ರ ಮಡಿವಾಳ, ರಾಘವೇಂದ್ರ ಶೆಟ್ಟಿ ಮುಂತಾದವರಿದ್ದರು.

ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮೂಲ ಸ್ಥಳದಲ್ಲೇ ಮುರಿನಕಟ್ಟೆ ನಿರ್ಮಾಣಕ್ಕೆ ಯೋಜನೆ ಸಿದ್ಧ : ವಿಶ್ವೇಶ್ವರ ಹೆಗಡೆ ಕಾಗೇರಿ

ಭಟ್ಕಳ: ಹೆದ್ದಾರಿ ಪ್ರಾಧಿಕಾರ ಮುರಿನಕಟ್ಟೆಯನ್ನು ಮೂಲ ಜಾಗದಲ್ಲಿಯೇ ಕಟ್ಟಲು ತಿರ್ಮಾನಿಸಿ ಈ ಕುರಿತು ನೀಲನಕ್ಷೇಯನ್ನು ತಯಾರಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಈ ವಿಚಾರದ ಕುರಿತಂತೆ ಜಿಲ್ಲಾಡಳಿತ ಹಾಗೂ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ ಸುರಕ್ಷಿತ ಆಶ್ರಯ ದೊರೆತಂತಿದ್ದು, ಕುಮಟಾ ಉಪವಿಭಾಗಾಧಿಕಾರಿಗಳ ಅನುಮತಿ ಬಳಿಕ ಹೋರಿಗಳನ್ನು ಗೋಶಾಲೆಗೆ ಕಳಿಸಿ, ಮೂಕ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ...

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ...

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...

ಭಟ್ಕಳದಲ್ಲಿ 14 ಜಾನುವಾರಗಳ ರಕ್ಷಣೆ : ಇಬ್ಬರ ವಿರುದ್ಧ ಪ್ರಕರಣ ದಾಖಲು

ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರ ವಿರುದ್ಧ ಭಟ್ಕಳ ಪಟ್ಟಣ ಪೊಲೀಸ್...

ಮಹಾಶಿವರಾತ್ರಿ ಪುಣ್ಯಕಾಲದಲ್ಲಿ ಕಣಕಣೇಶ್ವರ ದೇವರ ನೂತನ ಭವ್ಯ ದೇವಸ್ಥಾನ ಲೋಕಾರ್ಪಣೆ :ಶಿಖರ ಕಲಶ ಪ್ರತಿಷ್ಠೆ – ಅಷ್ಟಬಂಧ ಸಮೇತ ನೂತನ ಶಿವಲಿಂಗ ಪ್ರತಿಷ್ಠಾ ಮಹೋತ್ಸವ

ಅಂಕೋಲಾ: ಪಟ್ಟಣದ ಕಾರವಾರ ರಸ್ತೆಯಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ಕಣಕಣೇಶ್ವರ ದೇವಾಲಯವು ಮಹಾಶಿವರಾತ್ರಿ ಪುಣ್ಯಸಂದರ್ಭದಲ್ಲಿ ನೂತನ...