ಹೊನ್ನಾವರ: ತಾಲೂಕಿನ ಹಳದೀಪುರ ಗ್ರಾಮದ ಅಗ್ರಹಾರದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕುಮಟಾದಿಂದ ಹೊನ್ನಾವರ ಕಡೆಗೆ ಅತಿವೇಗ ನಿಷ್ಕಾಳಜಿತನದಿಂದ ಮಾರುತಿ ಸ್ವಿಪ್ಟ್ ಕಾರನ್ನು ಚಲಾಯಿಸಿಕೊಂಡು ಬರುತ್ತಿದ್ದ ಸುಕುಮಾರ ಸುಬ್ರಾಯ ಆಚಾರ್ಯ ಈತನು ರಾಷ್ಟ್ರೀಯ ಹೆದ್ದಾರಿ 66 ರ ಹಳದೀಪುರ ಗ್ರಾಮದ ಅಗ್ರಹಾರದ ಮಣ್ಣಗದ್ದೆ ಕ್ರಾಸಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಮಹೇಶ ಸುಬ್ರಾಯ ಗೌಡ ಈತನಿಗೆ ಹಿಂಬದಿಯಿoದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆತಕ್ಕೆ ಮಹೇಶನ ಕೈ, ಕಾಲು ಹಾಗೂ ಕುತ್ತಿಗೆಯ ಭಾಗಕ್ಕೆ ಗಂಭೀರ ಹೊಡೆತ ಬಿದ್ದಿದ್ದು, ಮಹೇಶ ಸುಬ್ರಾಯ ಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹೊನ್ನಾವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ