ಸಿದ್ದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಸುಮಾರು ಮೂರು ಲಕ್ಷಕ್ಕೂ ಅಧಿಕ ನಷ್ಟ ವಾದ ಘಟನೆ ಸಿದ್ದಾಪುರ ತಾಲೂಕಿನ ಕೊರ್ಲ್ ಕೈ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲಿಕೊಪ್ಪದಲ್ಲಿ ನಡೆದಿದೆ. ರಾಧಾ ಗಣಪತಿ ಮಡಿವಾಳ ನೆಲ್ಲಿಕೊಪ್ಪ ಎನ್ನುವವರಿಗೆ ಸೇರಿದ ಜಮೀನಿನಲ್ಲಿ ಆಕಸ್ಮಿಕ ಬೆಂಕಿ ತಗುಲಿ 100 ಅಡಿಕೆ ಮರ, ಐದು ತೆಂಗಿನ ಮರ, ಪಿವಿಸಿ ಪೈಪ್ಗಳು, ಕರೆಂಟ್ ವೈರ್, ಕಟ್ಟಿಗೆ ಸೇರಿದಂತೆ ಹಲವಾರು ವಸ್ತುಗಳು ಸಂಪೂರ್ಣ ನಾಶವಾಗಿವೆ.
ಸ್ಥಳಕ್ಕೆ ಅಗ್ನಿಶಾಮಕ ದಳದವರು ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಲು ಪ್ರಯತ್ನಿಸಿದರು ಕೂಡ ಸಾಧ್ಯವಾಗದೆ ಎಲ್ಲ ವಸ್ತುಗಳು ನಾಶವಾಗಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡದಿಂದ ನಾಶವಾದ ರೈತರಿಗೆ ಸರ್ಕಾರ ಪರಿಹಾರ ಕೊಡಬೇಕು ಎನ್ನುವ ಒತ್ತಾಯ ರೈತರು ಮಾಡಿದ್ದಾರೆ.
ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ