ಅಂಕೋಲಾ: ಕನ್ನಡ ಸಾಹಿತ್ಯ ಪರಿಷತ್ತಿನ ಅಂಕೋಲಾ ಘಟಕ ಹಮ್ಮಿಕೊಳ್ಳುತ್ತಾ ಬಂದಿರುವ ತಾಲೂಕು ಸಾಹಿತ್ಯ ಸಮ್ಮೇಳನ ಕಳೆದ ವರ್ಷ ಅದ್ದೂರಿ ದಶಮಾನೋತ್ಸವ ಕಾರ್ಯಕ್ರಮದೊಂದಿಗೆ ಸಂಪನ್ನಗೊoಡಿದ್ದು , ಈ ಬಾರಿ 11 ನೇ ವರ್ಷಾಚರಣೆ ಸಂಭ್ರಮದಲ್ಲಿದೆ. ಫೆ 25 ರ ಮಂಗಳವಾರ ಅಂಕೋಲಾ ಪಟ್ಟಣದ ನಾಡವರ ಸಮುದಾಯ ಭವನದಲ್ಲಿ, 11 ನೇ ಸಾಹಿತ್ಯ ಸಮ್ಮೇಳನ ಹಿರಿಯ ಸಾಹಿತಿ ಜಿ ಯು ನಾಯಕ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಿತು. ಅಂಕೋಲಾದ ನೂತನ ತಹಶೀಲ್ಧಾರ ನಿಶ್ಚಲ ನರೋನಾ ರಾಷ್ಟ್ರ ಧ್ವಜಾರೋಹಣ, ಕಸಾಪ ತಾಲೂಕು ಅಧ್ಯಕ್ಷ ಗೋಪಾಲಕೃಷ್ಣ ನಾಯಕ ಕನ್ನಡ ಧ್ವಜ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು. ಗಣಪತಿ ತಾಂಡೇಲ ನಿರ್ವಹಿಸಿದರು.
ಸಮ್ಮೇಳನದ ಸರ್ವಾಧ್ಯಕ್ಷರಾದ ಜಿ ಯು ನಾಯಕ ಉಪಸ್ಥಿತಿಯಲ್ಲಿ, ರಾಜೇಂದ್ರ ಶೆಟ್ಟಿ ಮತ್ತಿತರ ಪ್ರಮುಖರು ನಾಡವರ ಸಭಾಭವನದ ಆವರಣದಲ್ಲಿ ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ನಮಿಸಿ, ಕನ್ನಡ ಧ್ವಜ ಎತ್ತಿ ತೋರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ನಾಡವರ ಸಮುದಾಯ ಭವನದಿಂದ ಹೊರಟು ಕೆಎಲ್ ಇ ರಸ್ತೆ ಮೂಲಕ ಬಸ್ ನಿಲ್ದಾಣದ ಎದುರಿಂದ ಜೈಹಿಂದ್ ಸರ್ಕಲ್ ಮಾರ್ಗವಾಗಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಸಾಗಿ ಬಂದ ಮೆರವಣಿಗೆ ನಾಡವರ ಸಮುದಾಯ ಭವನದತ್ತ ಮರಳಿ ಸಂಪನ್ನಗೊoಡಿತು ವಾದ್ಯ ಮೇಳದೊಂದಿಗೆ ಸಂಘಟಕರು ಅತಿಥಿ ಗಣ್ಯರು,ವಿದ್ಯಾರ್ಥಿಗಳು ,ಇತರರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಲೋಕೋಪಯೋಗಿ ಇಲಾಖೆಯ ಕಾರವಾರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರಾಮು ಅರ್ಗೇಕರ ರಿಬ್ಬನ್ ಕತ್ತರಿಸುವ ಮೂಲಕ ಪುಸ್ತಕ ಮಳಿಗೆಗಳನ್ನು ಉದ್ಘಾಟಿಸಿದರು,ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಹಾಗೂ ಸೇಂಟ್ ಮಿಲಾಗ್ರಿಸ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಾರ್ಜ ಫರ್ನಾಂಡಿಸ್ ಅವರು ಹಿರಿಯ ಸಾಹಿತಿ ವಿಷ್ಣು ನಾಯ್ಕ ಅಂಬಾರಕೋಡ್ಲ ಮತ್ತು ನಿವೃತ್ತ ಶಿಕ್ಷಕ ಪ್ರಕಾಶ ಕುಂಚಿ ನೆನಪಿನ ದ್ವಾರಗಳ ಉದ್ಘಾಟನೆ ನೆರವೇರಿಸಿದರು.
ಬೆಂಗಳೂರಿನ ಹಿರಿಯ ಸಾಹಿತಿ ಪ್ರತಿಭಾ ನಂದಕುಮಾರ ದೀಪಬೆಳಗಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು . ಹಿರಿಯ ಸಾಹಿತಿ ಶಾಂತಾರಾಮ ನಾಯಕ, ಹಿಚಕಡ ಅವರು ಜೆ. ಜಯಲಕ್ಷ್ಮೀ ಅವರ ಜಾನಪದ-ಸುಜ್ಞಾನ ಪಥ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು. ಈ ಹಿಂದೆ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಡಾ. ರಾಮಕೃಷ್ಣ ಗುಂದಿ ಕಡಲ ಸಿರಿ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ವಿಚಾರಗೋಷ್ಠಿ, ಕವಿಗೋಷ್ಠಿ, ಸಾಂಸ್ಕೃತಿಕ ಮತ್ತಿತರ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆದವು.ಸಾಹಿತ್ಯಾಸಕ್ತರು,ವಿದ್ಯಾರ್ಥಿಗಳು,ಸಾರ್ವಜನಿಕರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಹಲವು ಗಣ್ಯರು ವೇದಿಕೆ ಅಲಂಕರಿಸಿದ್ದರು .
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ