Important

ವಿಜ್ಞಾನ ದಿನಾಚರಣೆ: ಗಮನಸೆಳೆದ ವಸ್ತುಪ್ರದರ್ಶನ

Share

ಕುಮಟಾ: ವಿಜ್ಞಾನ ಎನ್ನುವುದು ಜಗತ್ತಿಗೆ ಬೆಳಕು ನೀಡಿದ ಒಂದು ವಿಚಾರ ಕ್ರಮ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವುದು ಹಿಂದಿನ ಅಗತ್ಯತೆಯಾಗಿದ್ದು ಈ ನಿಟ್ಟಿನಲ್ಲಿ ಶಾಲೆಗಳು ಕಾರ್ಯನಿರ್ವಹಿಸಬೇಕು ಎಂದು ರಾಷ್ಟ್ರೀಯ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪನ್ಮೂಲ ವ್ಯಕ್ತಿ, ವಿಧಾತ್ರಿ ಅಕಾಡೆಮಿಯ ವಿಕ್ಕಿ ವಾಸ್ವಾನಿ ಹೇಳಿದರು. ಅವರು ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸರಸ್ವತಿ ವಿದ್ಯಾಕೇಂದ್ರದಲ್ಲಿ ನಡೆದ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ, ಕಾರ್ಯನಿರ್ವಹಿಸುವ ವಿಜ್ಞಾನ ಪರಿಕರಗಳ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಎಳೆವೆಯಲ್ಲಿಯೇ ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತಾಗಿ ಆಸಕ್ತಿ ಬೆಳೆಸಬೇಕು. ಇಂತಹ ಕಾರ್ಯ ಮಾಡುವುದು ಪ್ರಸ್ತುತ ಸಮಾಜದ ಅಗತ್ಯತೆಯಾಗಿದೆ. ದೊಡ್ಡ ದೊಡ್ಡ ಪಟ್ಟಣಗಳಲ್ಲಿ ಅವುಗಳಿಗೆ ಸೂಕ್ತ ವ್ಯವಸ್ಥೆ ಇರುತ್ತದೆ. ಆದರೆ ಕುಮಟಾದಂತಹ ಸ್ಥಳದಲ್ಲಿ ಇರುವ ಸಂಪನ್ಮೂಲಗಳ ಬಳಕೆಯನ್ನೇ ಮಾಡಿಕೊಂಡು ಇಷ್ಟು ಅತ್ಯುತ್ತಮವಾಗಿ, ಈ ರೀತಿಯಾದ ವಿಜ್ಞಾನ ದಿನವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಸಾಪ್ಟವೇರ್ ಇಂಜಿನಿಯರ್ ರಾಮಪ್ರಸನ್ನ ಖಾರ್ವಿ ಮಾತನಾಡಿ, 1928 ರ ಫೆಬ್ರವರಿ 28 ರಂದು ಮಹಾನ್ ವಿಜ್ಞಾನಿ ಸರ್.ಸಿ.ವಿ.ರಾಮನ್ ಅವರು ವಿಶ್ವ ಪ್ರಸಿದ್ಧವಾದ ರಾಮನ್ ಎಫೆಕ್ಟ ಅನ್ನು ಜಗತ್ತಿಗೆ ಬಹಿರಂಗ ಪಡಿಸಿದರು. ಈ ದಿನವನ್ನು ಇಷ್ಟು ವಿಭಿನ್ನವಾಗಿ ಹಮ್ಮಿಕೊಂಡು ಸಂಸ್ಥೆ ವಿದ್ಯಾರ್ಥಿಗಳ ಭವಿಷ್ಯತ್ತಿಗೆ ಮುನ್ನುಡಿ ಬರೆದಿದೆ. ವಿಜ್ಞಾನ ಎಂದರೆ ಇರುವುದನ್ನು ಹೊಸ ದೃಷ್ಟಿಕೋನದಲ್ಲಿ ನೋಡುವ ವ್ಯವಸ್ಥೆಯಾಗಿದೆ. ವಿದ್ಯಾರ್ಥಿಗಳು ವೈವಿಧ್ಯಮಯವಾದ ವೈಜ್ಞಾನಿಕ ಪರಿಕರಗಳನ್ನು ತಯಾರಿಸಿದ್ದು, ಅವರ ಮುಂದಿನ ಬದುಕಿಗೆ ಅದು ಮಾರ್ಗದರ್ಶಿಯಾಗಲಿದೆ. ಹೊಸದನ್ನು ಕಂಡುಹಿಡಿಯುವ ಹಂಬಲವೇ ವಿಜ್ಞಾನ ಬೆಳೆಯಲು ಕಾರಣವಾಗಿದೆ ಹೀಗಾಗಿ ವಿದ್ಯಾರ್ಥಿಗಳು ಹೊಸ ಹೊಸ ಪ್ರಯೋಗಗಳನ್ನು ಪ್ರಯತ್ನಗಳನ್ನು ಮಾಡುತ್ತ ಸಾಗಬೇಕು. ಇದಕ್ಕೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಬಲ ತುಂಬಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಿದಾತ್ರಿ ಅಕಾಡೆಮಿಯ ಸಹಯೋಗದ ಸರಸ್ವತಿ ಪಿಯು ಕಾಲೇಜಿನ ಉಪನ್ಯಾಸಕ ಪ್ರಸನ್ನ ಹೆಗಡೆ ವಿದ್ಯಾರ್ಥಿಗಳಿಗೆ ಪ್ರಯೋಗಗಳ ಮೂಲಕ ವಿಜ್ಞಾನದ ವಿಸ್ಮಯ ತೋರಿಸಿ, ಈ ಮೂಲಕ ವಿಜ್ಞಾನದಲ್ಲಿ ಆಸಕ್ತಿ ಮೂಡಿಸುವ ಕಾರ್ಯ ಮಾಡಿದರು. ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕ ಗುರುರಾಜ ಶೆಟ್ಟಿ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಸ್ಮಾರ್ಟ ಅಂಬ್ಯುಲೆನ್ಸ್, ರೇನ್ ಸೆನ್ಸಾರ್, ಭೂಕಂಪ ಅಲಾರಾಂ, ಹೋಲೋಗ್ರಾಮ್, ಲೈಟ್ ಫೆಡಿಲಿಟಿ, ಆಟೋಮಿಕ್ ವಾಟರ್ ಫಂಕ್ಷನ್, ಸ್ಮಾರ್ಟ ಸಿಟಿಯಂತಹ ಹಲವಾರು ವೈವಿದ್ಯಮಯ ಹಾಗೂ ಕ್ರಿಯಾಶೀಲ ವಿಜ್ಞಾನ ಮಾದರಿ ತಯಾರಿಸಿ ತಂದು ಗಮನ ಸೆಳೆದರು. ಮುಖ್ಯೋಪಾಧ್ಯಾಯ ಗಣೇಶ ಜೋಶಿ ಸಂಕೊಳ್ಳಿ ಸ್ವಾಗತಿಸಿ, ಪ್ರಾಸ್ಥಾವಿಕ ನುಡಿಗಳನ್ನು ಆಡಿದರು. ಶಿಕ್ಷಕರ ಗೌರೀಶ ಭಂಡಾರಿ ನಿರೂಪಿಸಿದರು. ಮುಖ್ಯ ಶಿಕ್ಷಕಿ ಸುಜಾತಾ ನಾಯ್ಕ ವಂದಿಸಿದರು. ವಿಜ್ಞಾನ ಶಿಕ್ಷಕರಾದ ಉಷಾ ಭಟ್ಟ, ಪ್ರಜ್ಞಾ ನಾಯ್ಕ, ಶೃತಿ ಪೆಡ್ನೇಕರ್, ವೈಭವಕುಮಾರ್ ಎಚ್ ಇದ್ದರು.

ವಿಸ್ಮಯ ನ್ಯೂಸ್, ಕುಮಟಾ

Share

Don't Miss

ಉಚಿತ ಹೃದಯ ರೋಗ ತಪಾಸಣಾ ಶಿಬಿರ : ಮೇ 31ರ ಶನಿವಾರದಂದು ಕುಮಟಾ ತಾಲೂಕಾಸ್ಪತ್ರೆಯಲ್ಲಿ ಆಯೋಜನೆ

ಕುಮಟಾ: ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಸೇವಾಖಂಡದ ಯೋಗಕ್ಷೇಮ ವಿಭಾಗ , ಜನಪರ ಹೋರಾಟ ವೇದಿಕೆ ಕುಮಟಾ ಹಾಗೂ ತಾಲೂಕಾಸ್ಪತ್ರೆ ಕುಮಟಾ ಇವರ ಸಹಯೋಗದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು...

ವಾಡಿಕೆಗಿಂತ ಅಧಿಕ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ ನೋಡಿ?

ಕಾರವಾರ: ಜೂನ್ ತಿಂಗಳಿನಲ್ಲಿ ಆರಂಭವಾಗುವ ಮುಂಗಾರು ಮಳೆಯ ಪ್ರಮಾಣವು ವಾಡಿಕೆಗಿಂತ ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ದೇಶದಾದ್ಯಂತ ಶೇ. 106 ರಷ್ಟು ಮಳೆಯಾಗಲಿದ್ದು, 87...

ಸಂಪನ್ನಗೊoಡ ಹೊನ್ನೆಬೈಲ್ ಹಬ್ಬ: ಹರಿದು ಬಂದ ಭಕ್ತ ಸಾಗರ

ಅಂಕೋಲಾ: ಹೊನ್ನೆಬೈಲ್ ಗ್ರಾಮ ದೇವರುಗಳಾದ ಶ್ರೀಬೊಮ್ಮಯ್ಯ ದೇವರು, ಶ್ರೀಕುಸ್ಲೆ ದೇವರು ಮತ್ತು ಶ್ರೀಮಾಣಿಬೀರ ದೇವರುಗಳ ಬಂಡಿಹಬ್ಬಕ್ಕೆ ಪೂರಕವಾದ ವಿಶೇಷ ಹಬ್ಬ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅತ್ಯಂತ ವಿಜೃಂಭಣೆಯಿoದ ನಡೆಯಿತು. ಕಾರಣಾಂತರಗಳಿoದ...

ಈ ಊರಿನವರ ಗೋಳಿನ ಕಥೆ-ವ್ಯಥೆ ನೋಡಿ

ಶಿರಸಿ: ಇದು ಯಾವುದೋ ಇತಿಹಾಸದ ಕಟ್ಟು ಕಥೆಯಲ್ಲ.. ಅಕ್ಷರಶಃ ಜೀವ ಕೈಯ್ಯಲ್ಲಿಡಿದು ಸಾಗಿ, ಕುಗ್ರಾಮದ ಕರಾಳ ಕಥೆಗೆ ಸಾಕ್ಷಿಯಾದ ಕಣ್ಣುಗಳ ಅಕ್ಷರ ರೂಪದ ಚಿತ್ರಣವಿದು.. ಶಿರಸಿ ತಾಲೂಕಿನ ಗಡಿಭಾಗಕ್ಕೆ ಹೊಂದಿಕೊoಡಿರುವ ಮುಷ್ಕಿ...

ಶಿರಸಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗಟಾರಕ್ಕೆ ಉರುಳಿಬಿದ್ದ ಖಾಸಗಿ ಬಸ್

ಶಿರಸಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ಗಟಾರಕ್ಕೆ ಉರುಳಿದ ಘಟನೆ ಶಿರಸಿ ತಾಲೂಕಿನ ಶಿರಸಿ-ಯಲ್ಲಾಪುರ ರಸ್ತೆಯ ಕಡವೆ ಕ್ರಾಸ್ ಬಳಿ ಸಂಭವಿಸಿದೆ. ಎದುರಿನಿಂದ ಬಂದ ವಾಹನಕ್ಕೆ ಜಾಗ ನೀಡುವ ವೇಳೆ...

ಉಚಿತ ಹೃದಯ ರೋಗ ತಪಾಸಣಾ ಶಿಬಿರ : ಮೇ 31ರ ಶನಿವಾರದಂದು ಕುಮಟಾ ತಾಲೂಕಾಸ್ಪತ್ರೆಯಲ್ಲಿ ಆಯೋಜನೆ

ಕುಮಟಾ: ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಸೇವಾಖಂಡದ ಯೋಗಕ್ಷೇಮ ವಿಭಾಗ , ಜನಪರ ಹೋರಾಟ ವೇದಿಕೆ ಕುಮಟಾ ಹಾಗೂ ತಾಲೂಕಾಸ್ಪತ್ರೆ ಕುಮಟಾ ಇವರ ಸಹಯೋಗದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು...

Related Articles

ಸಂಪನ್ನಗೊoಡ ಹೊನ್ನೆಬೈಲ್ ಹಬ್ಬ: ಹರಿದು ಬಂದ ಭಕ್ತ ಸಾಗರ

ಅಂಕೋಲಾ: ಹೊನ್ನೆಬೈಲ್ ಗ್ರಾಮ ದೇವರುಗಳಾದ ಶ್ರೀಬೊಮ್ಮಯ್ಯ ದೇವರು, ಶ್ರೀಕುಸ್ಲೆ ದೇವರು ಮತ್ತು ಶ್ರೀಮಾಣಿಬೀರ ದೇವರುಗಳ ಬಂಡಿಹಬ್ಬಕ್ಕೆ...

ಈ ಊರಿನವರ ಗೋಳಿನ ಕಥೆ-ವ್ಯಥೆ ನೋಡಿ

ಶಿರಸಿ: ಇದು ಯಾವುದೋ ಇತಿಹಾಸದ ಕಟ್ಟು ಕಥೆಯಲ್ಲ.. ಅಕ್ಷರಶಃ ಜೀವ ಕೈಯ್ಯಲ್ಲಿಡಿದು ಸಾಗಿ, ಕುಗ್ರಾಮದ ಕರಾಳ...

ಶಿರಸಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗಟಾರಕ್ಕೆ ಉರುಳಿಬಿದ್ದ ಖಾಸಗಿ ಬಸ್

ಶಿರಸಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ಗಟಾರಕ್ಕೆ ಉರುಳಿದ ಘಟನೆ ಶಿರಸಿ ತಾಲೂಕಿನ ಶಿರಸಿ-ಯಲ್ಲಾಪುರ...

ಉಚಿತ ಹೃದಯ ರೋಗ ತಪಾಸಣಾ ಶಿಬಿರ : ಮೇ 31ರ ಶನಿವಾರದಂದು ಕುಮಟಾ ತಾಲೂಕಾಸ್ಪತ್ರೆಯಲ್ಲಿ ಆಯೋಜನೆ

ಕುಮಟಾ: ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಸೇವಾಖಂಡದ ಯೋಗಕ್ಷೇಮ ವಿಭಾಗ , ಜನಪರ ಹೋರಾಟ ವೇದಿಕೆ...