ದಾಂಡೇಲಿ; ಕೇಂದ್ರ ಮತ್ತು ರಾಜ್ಯ ಸರ್ಕಾರವು ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಿದ್ದರೂ ಸಹ ಕೆಲವು ಕಡೆಗಳಲ್ಲಿ ಪ್ಲಾಸ್ಟಿಕ್ ಬಳಸುವುದು ಕಂಡು ಬಂದ ಕಾರಣ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ದಾಂಡೇಲಿ ನಗರಸಭಾ ವ್ಯಾಪ್ತಿಯಲ್ಲಿ ದಂಡ ವಿಧಿಸಿ ಎಚ್ಚರಿಕೆ ನೀಡಿದರು. ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿದ್ದ ಹೊಲ್‌ಸೇಲ್ ಅಂಗಡಿಗಳು, ಹೂ ಹಣ್ಣಿನ ಅಂಗಡಿಗಳು, ಕಿರಾಣಿ ಅಂಗಡಿಗಳು, ಬೇಕರಿಗಳ ಮೇಲೆ ದಾಳಿ ಮಾಡಿ ಪ್ಲಾಸ್ಟಿಕ್ ಸ್ಪೂನ್ ಮತ್ತು ಕ್ಯಾರಿಬ್ಯಾಗ್ ಸೇರಿದಂತೆ ಸುಮಾರು 210 ಕೆಜಿ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ಒಟ್ಟು 11,500 ರೂ. ದಂಡ ವಿಧಿಸಿದರು. ವ್ಯಾಪಾರಿಗಳಲ್ಲಿ ಹಾಗೂ ಅಲ್ಲಿ ನೆರೆದಿದ್ದ ಸಾರ್ವಜನಿಕರಲ್ಲಿ ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಉಪಯೋಗಿಸದಂತೆ ಜಾಗೃತಿ ಮೂಡಿಸಲಾಯಿತು.
ವಿಸ್ಮಯ ನ್ಯೂಸ್, ದಾಂಡೇಲಿ