Important

ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ ಮಾಲಾಧಾರಿಗಳಿಂದ ಮಹಾಪೂಜೆ: ಸ್ವಾಮಿಗಳಿಂದ ಶಬರಿಮಲೆ ಪ್ರಯಾಣ

Share

ಹೊನ್ನಾವರ: ಕವಲಕ್ಕಿಯ ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ ಮಾಲಾಧಾರಿಗಳಿಂದ ಶ್ರೀ ಕ್ಷೇತ್ರ ಶಬರಿಮಲೆ ಯಾತ್ರೆಯ ಪ್ರಯುಕ್ತ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಅನ್ನದಾನ ಕಾರ್ಯಕ್ರಮವು, ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಶ್ರದ್ಧಾಭಕ್ತಿಯಿಂದ ನೇರವೇರಿತು. ಅಯ್ಯಪ್ಪ ಸ್ವಾಮಿಯ 18 ಮೆಟ್ಟಿಲಿನ ಪಡಿ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಗುರುಸ್ವಾಮಿಯಾದ ಮಂಜುನಾಥ ಸ್ವಾಮಿ ಮಾತನಾಡಿ ನಾವು 38 ವರ್ಷಗಳಿಂದ ಮಾಲೆ ಧರಿಸಿಕೊಂಡು ಬರುತ್ತಿದ್ದು, ಓಳ್ಳೇಯ ರೀತಿಯಿಂದ ನಡೆಸಿಕೊಂಡು ಬರುತ್ಥಿದ್ದೇವೆ. ನಾನು ಪ್ರತಿ ತಿಂಗಳಿನಲ್ಲಿ ಶಬರಿಮಲೆ ಯಾತ್ರೆಯನ್ನು ಕೈಗೊಳ್ಳುತ್ತಿದ್ದು, ಅಯ್ಯಪ್ಪ ಸ್ವಾಮಿಯು ನಂಬಿದವರನ್ನು ಯಾವತ್ತು ಕೈಬಿಡುವುದಿಲ್ಲ. ಅಯ್ಯಪ್ಪ ಭಕ್ತರು ಅಯ್ಯಪ್ಪ ಮಾಲೆಯನ್ನು ಧರಿಸಿ ಶಬರಿಮಲೆ ಯಾತ್ರೆ ಕೈಗೊಳ್ಳುತ್ತಿದ್ದೇವೆ ಎಂದು ವೃತದ ಬಗ್ಗೆ ಮಾಹಿತಿ ನೀಡಿದರು.

ಅಯ್ಯಪ್ಪ ಸ್ವಾಮಿಗೆ ತುಳಸಿ ಅರ್ಚನೆ, ಪುಷ್ಪಾರ್ಚನೆ, ದೂಪದ ಆರತಿ, ಭಸ್ಮದ ಆರತಿ, ತುಪ್ಪದ ಆರತಿ, ಪಂಚ ಆರತಿ ಹೀಗೆ ವಿವಿಧ ವಿಶೇಷ ಪೂಜೆಗಳು ನೇರವೇರಿತು. ಸುತ್ತಮುತ್ತಲಿನ ಭಕ್ತರು ಸ್ವಾಮಿಯ ಸನ್ನಿಧಾನದಲ್ಲಿ ಬಂದು ತುಪ್ಪದ ಕಾಯಿ ಸೇವೆಗಳನ್ನ ಸಮರ್ಪಿಸಿದರು. 8 ಮಾಲಾಧಾರಿಗಳಿಂದ ಸ್ವಾಮಿಗೆ ವಿಶೇಷ ಸೇವೆಗಳು ನಡೆಯಿತು.

ಸನ್ನಿಧಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಕಲಿಯುಗದ ವರದನ ನಾಮಸ್ಮರಣೆ ಮಾಡುತ್ತಾ ಮಾಲಾಧಾರಿ ಸ್ವಾಮಿಗಳು ಭಕ್ತಿಭಾವದಿಂದ ಸ್ವಾಮಿಯೆ ಶರಣಂ ಅಯ್ಯಪ್ಪ ಎಂದು ಪೂಜೆ ಸಲ್ಲಿಸಿದರು. ಭಕ್ತರು ಪೂಜಾಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀದೇವರ ದರ್ಶನ ಪಡೆದು ಕೃತಾರ್ತರಾದರು.ನಂತರ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಭಜನಾ ಕಾರ್ಯಕ್ರಮ ನಡೆಯಿತು. ನಂತರ ಮಹಾಪೂಜೆ,ಇರುಮುಡಿ ಕಟ್ಟುವ ಕಾರ್ಯಕ್ರಮ ನಡೆಯಿತು. ತದನಂತರ ಸ್ವಾಮಿಗಳು ಶಬರಿಮಲೆ ಪ್ರಯಾಣ ಬೆಳೆಸಿದರು.

ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ ಸಾಧ್ಯತೆ ಇರುತ್ತದೆ. ಆದರೆ ಹೋಮಿಯೋಪತಿ ಚಿಕಿತ್ಸೆಯು ಕಾಯಿಲೆಯನ್ನು ಶಾಶ್ವತವಾಗಿ ಗುಣಪಡಿಸುವುದಲ್ಲದೆ, ಯಾವುದೇ ಅಡ್ಡಪರಿಣಾಮಗಳನ್ನು ಹೊಂದಿರುವುದಿಲ್ಲ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನಲ್ಲಿ ಸಹಾಯಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. BSc, B.Ed (PCM) ಅರ್ಹತೆ ಹೊಂದಿದವರಿಗೆ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...