ಭಟ್ಕಳ: ಕಾಂಗ್ರೇಸ್ ಪಕ್ಷ ಕೇವಲ ಚುನಾವಣೆ ಗೆಲ್ಲುವ ಉದ್ದೇಶದಿಂದ ಗ್ಯಾರಂಟಿ ಯೋಜನೆಯನ್ನು ಹೊರತರಲಿಲ್ಲ. ಬದಲಾಗಿ ಜನಸಾಮಾನ್ಯರ ಆರ್ಥಿಕ ಮಟ್ಟವನ್ನು ಏರಿಸುವ ನಿಟ್ಟಿನಲ್ಲಿ ಹಾಗೂ ಜನರಲ್ಲಿ ಕೊಳ್ಳುವಿಕೆಯ ಶಕ್ತಿಯನ್ನು ಹೆಚ್ಚಿಸಿ ಆರ್ಥಿಕ ಚೈತನ್ಯಕ್ಕೆ ಸಹಕಾರಿಯಾಗುವ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಹೊರತರಲಾಗಿದೆ ಎಂದು ಕಾಂಗ್ರೇಸ್ ಪಕ್ಷದ ಜಿಲ್ಲಾಅಧ್ಯಕ್ಷ ಸಾಯಿ ಗಾವಂಕರ ಹೇಳಿದರು.
ಕೆ.ಪಿಸಿ.ಸಿ ನಿರ್ದೇಶನದ ಮೇರೆಗೆ ಕಾಂಗ್ರೇಸ್ ನಡಿಗೆ ಕಾರ್ಯಕರ್ತರ ಕಡೆಗೆ ಘೊಷಣೆಯೊಂದಿಗೆ ಭಟ್ಕಳ ತಾಲೂಕಿನ ಸಾರದಹೊಳೆಯ ಹಳೆಕೋಟೆ ಹನುಮಂತ ದೇವಸ್ಥಾನದ ನಾಮಧಾರಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಾಂಗ್ರೇಸ್ ಪಕ್ಷದ ಬಲವರ್ಧನೆಗಾಗಿ ಈಗಾಗಲೇ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಗೂಗಲ್ ಫಾರ್ಮ ಮೂಲಕ ಪಕ್ಷದ ಸದಸ್ಯತ್ವವ ಅಭಿಯಾನವನ್ನು ಕೈಗೊಳ್ಳಲಾಗಿದೆ. ಪಕ್ಷ ಸಂಘಟನೆಯಲ್ಲಿ ನಿಸ್ಕ್ರೀಯರಾಗಿರುವ ಪಧಾಧಿಕಾರಿಗಳನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಚಿಂತಿಸಿಸಲಾಗುತ್ತಿದೆ.
ನಮ್ಮ ಜಿಲ್ಲೆಯಲ್ಲಿ ಕೈಗೆ ಸಿಗುವ ಹಿಂದುಳಿದ ವರ್ಗದ ಮಂತ್ರಿಗಳು ಇರುವುದು ನಮ್ಮ ಸೌಭಾಗ್ಯವಾಗಿ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಏಕೈಕ ಪಕ್ಷವೆಂದರೆ ಅದು ಕಾಂಗ್ರೇಸ್ ಪಕ್ಷವಾಗಿದೆ. ಗಾಂಧಿಜಿಯವರು ನಮ್ಮ ಪಕ್ಷದ ಅಧ್ಯಕ್ಷರಾಗಿದ್ದರು ಹಾಗೂ ಕೇವಲ ಅಹಿಂಸಾ ಮಾರ್ಗದಲ್ಲಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಕಾಂಗ್ರೇಸ್ ಪಕ್ಷ ಮಾತ್ರ ಜಾತಿ, ಧರ್ಮವನ್ನು ನೋಡದೆ ಎಲ್ಲರನ್ನು ಸಮಾನವಾಗಿ ನೋಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಜಿಂ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಸಚಿವ ಮಂಕಾಳ ಎಸ್ ವೈದ್ಯ, ಭಟ್ಕಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವೆಂಕಟೇಶ ನಾಯ್ಕ, ಅರಣ್ಯ ಹೋರಾಟಗಾರರ ಸಮಿತಿಯ ತಾಲೂಕಾ ಅಧ್ಯಕ್ಷ ರಾಮ ಮೊಗೇರ, ನಯನಾ ನಾಯ್ಕ ಮತ್ತಿತರರು ಹಾಜರಿದ್ದರು.
ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ