ಕುಮಟಾ: ಅಂಕೋಲಾ ಬೇಲೆಕೆರಿಯಿಂದ ಶಿರಸಿ ಸಾಗರಮಾಲಾ ಯೋಜನೆಯಡಿ ಮಂಜೂರಿಯಾಗಿದ್ದ ರಸ್ತೆ ಕಾಮಗಾರಿ ಗುತ್ತಿಗೆ ಪಡೆದ ಆರ್.ಎನ್.ಎಸ್. ಕಂಪನಿಯು ವಿವಿಧ ಕಾರಣಗಳನ್ನು ನೀಡಿ ಕಾಮಗಾರಿಯನ್ನು ಪೂರ್ಣ ಮಾಡಲು ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿಯ ಸ್ಥಳಕ್ಕೆ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿಯವರು ಭೆಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ನೋಡಿ ಕಂಪನಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕಳೆದ ಆರು ವರ್ಷಗಳಿಂದ ನಡೆಯುತ್ತಿರುವ ಈ ರಸ್ತೆ ಕಾಮಗಾರಿಯು ಇನ್ನೂ ಪೂರ್ಣವಾಗಿಲ್ಲ. ಆದ್ದರಿಂದ ಈ ಭಾಗದಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ದಿನ ನಿತ್ಯ ಕೆಲಸಕ್ಕೆ ತೆರಳುವ ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.
ಇದರ ಬಗ್ಗೆ ಶಾಸಕರಾದ ದಿನಕರ ಶೆಟ್ಟಿಯವರಲ್ಲಿ ದೂರು ಬಂದ ಹಿನ್ನೆಲೆಯಲ್ಲಿ ಕುಮಟಾ ಸಹಾಯಕ ಆಯುಕ್ತರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಕರು ಹಾಗೂ ರಸ್ತೆ ನಿರ್ಮಾಣದ ಜವಾಬ್ದಾರಿ ಹೊಂದಿರುವ ಆರ್‌ಎನ್‌ಎಸ್ ಕಂಪನಿಯ ಪ್ರತಿನಿಧಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಆರ್.ಎನ್.ಎಸ್. ಕಂಪನಿಯ ನಿರ್ಲಕ್ಷ್ಯ ಹಾಗೂ ಕಾಲಾವಕಾಶದಲ್ಲಿ ಕಾಮಗಾರಿ ಪೂರ್ಣಗೊಳಿಸದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಆರ್.ಎನ್.ಎಸ್. ಕಂಪನಿಯ ಅಧಿಕಾರಿಗಳೊಂದಿಗೆ ಫೋನ್ ಕರೆ ಮಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಆರ್.ಎನ್.ಎಸ್. ಕಂಪನಿಯು ವಿವಿಧ ಕಾರಣಗಳನ್ನು ನೀಡಿ ಕಾಮಗಾರಿಯನ್ನು ಪೂರ್ಣ ಮಾಡಲು ವಿಳಂಬ ಮಾಡುತ್ತಿದೆ. ಕಳೆದ ಆರು ವರ್ಷಗಳಿಂದ ನಡೆಯುತ್ತಿರುವ ಈ ರಸ್ತೆ ಕಾಮಗಾರಿಯು ಇನ್ನೂ ಪೂರ್ಣವಾಗಿಲ್ಲ. ಆದ್ದರಿಂದ ಈ ಭಾಗದಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ದಿನ ನಿತ್ಯ ಕೆಲಸಕ್ಕೆ ತೆರಳುವ ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.
ಇದು ಸಾರ್ವಜನಿಕರ ದಿನನಿತ್ಯದ ಜೀವನದ ಮೇಲೆ ಪರಿಣಾಮ ಬೀರುತ್ತಿರುವುದರಿಂದ ಕಾಮಗಾರಿಯನ್ನು ತಕ್ಷಣವೇ ವೇಗವಾಗಿ ಮುಗಿಸಲು ಎಚ್ಚರಿಕೆ ನೀಡಲಾಗಿದೆ. ಕುಮಟಾ ಭಾಗದಿಂದ ಈ ರಸ್ತೆಯಲ್ಲಿ ಸಂಚರಿಸುವ ಕೆಲಸಕ್ಕೆ ತೆರಳುವ ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕಂಪನಿಯ ವತಿಯಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕುಮಟಾ ಸಹಾಯಕ ಆಯುಕ್ತರಾದ ಕಲ್ಯಾಣಿ ಕಾಂಬ್ಳೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಕರು ಪ್ರಮುಖರಾದ ಗಜಾನನ ಪೈ ಸೇರಿದಂತೆ ಅಳಕೋಡ ಪಂಚಾಯತ್ ಅಧ್ಯಕ್ಷರು ಹಾಗೂ ಸಾರ್ವಜನಿಕರು ಹಾಜರಿದ್ದರು.
ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ…