ಕಾರವಾರ: ನಸುಕಿನಜಾವ ಅಂಗಡಿಯೊoದಕ್ಕೆ ಬೆಂಕಿ ತಗುಲಿ ಸಂಪೂರ್ಣ ಅಂಗಡಿಯು ಸುಟ್ಟು ಕರಕಲಾದ ಘಟನೆ ನಡೆದಿದೆ. ಕಾರವಾರ ನಗರದ ಕೆಎಚ್ ಬಿ ಕಾಲೋನಿಯ ಓಂಕಾರ ಸ್ಟೋರ್ಸ್ ಹೆಸರಿನ ಸ್ಟೇಶನರಿ ಅಂಗಡಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ. ಬೆಂಕಿಯಿoದ ಅಂಗಡಿಯಲ್ಲಿದ್ದ ಫ್ರಿಡ್ಜ್, ಸ್ಟೇಷನರಿ ವಸ್ತುಗಳು, ಇನ್ವರ್ಟರ್, ಕಂಪ್ಯೂಟರ್ ಹಾಗೂ ಇತರೆ ವಸ್ತುಗಳು ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂ ನಷ್ಟವಾಗಿದೆ ಎನ್ನಲಾಗಿದೆ. ಬೆಂಕಿಯನ್ನು ಕಂಡ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳದಕ್ಕೆ ಕರೆ ಮಾಡಿದ್ದು ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿಯು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್