ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಶಾಲೆಗಳಿಗೆ ಘೋಷಿಸಲಾಗಿದ್ದ ರಜೆಗಳ ಬೋಧನಾ ಅವಧಿಯನ್ನು ಸರಿದೂಗಿಸಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಸುತ್ತೋಲೆ ಹೊರಡಿಸಲಾಗಿದೆ. ಇದರ ಅನ್ವಯ, ಆಗಸ್ಟ್ 16, 2025ರಿಂದ ಆರಂಭವಾಗುವ ಪ್ರತಿ ಶನಿವಾರದಂದು ಪೂರ್ಣ ದಿನ ಶಾಲಾ ತರಗತಿಗಳನ್ನು ನಡೆಸುವಂತೆ ಆದೇಶಿಸಲಾಗಿದೆ.
ಹಳ್ಳಿಗಾಡಿನ ಅಣಬೆಗೆ ಭಾರೀ ಡಿಮ್ಯಾಂಡ್: ಮುಗಿಬಿದ್ದು ಖರೀದಿಸುತ್ತಿರುವ ಗ್ರಾಹಕರು
ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದ್ದು, ಸಂಬoಧಿಸಿದ ಎಲ್ಲ ಶಾಲೆಗಳು ಮತ್ತು ಶಿಕ್ಷಣಾಧಿಕಾರಿಗಳು ಇದಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಈ ನಿರ್ದೇಶನವು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಮತ್ತು ಭಟ್ಕಳ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ತಲುಪಿಸಲಾಗಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್