ಭಟ್ಕಳ: ಅಡಿಕೆ ಕಳ್ಳತನ ಮಾಡಿದ್ದ ಆರೋಪಿಗಳನ್ನ ಭಟ್ಕಳ ಗ್ರಾಮೀಣ ಠಾಣಾ ಪೋಲಿಸರು ಹೆಡೆಮುರಿ ಕಟ್ಟಿದ್ದಾರೆ. ಭಟ್ಕಳ ಮಾರುಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟಗೊಂಡ ಗ್ರಾಮದಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣವನ್ನು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯವರು ಭೇದಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಮೊಹಮ್ಮದ್ ಶೇಖ, ಮೊಹಮ್ಮದ್ ಖಾಜಾ, ಮೊಹಮ್ಮದ್ ಇರ್ಶಾದ್, ಮೊಹಮ್ಮದ್ ಮುಸಾದಿಕ್ ಬಂಧಿತ ಆರೋಪಿಗಳಾಗಿದ್ದು, ಮೊಹಮ್ಮದ್ ನಿಜಾಮ್ ಪರಾರಿಯಾದ ಆರೋಪಿಯಾಗಿದ್ದಾನೆ. ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದು, ಅವರಿಂದ 175 ಕೆ.ಜಿ. ಅಡಿಕೆ ಹಾಗೂ ಕಳ್ಳತನಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ.
ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ