Important

ಮುರುಡೇಶ್ವರದಲ್ಲಿ RNS ಪ್ರಥಮ ದರ್ಜೆ ಕಾಲೇಜು ವತಿಯಿಂದ ಇಂದು ನಶೆಮುಕ್ತ ಭಾರತ ಅಭಿಯಾನ

Share

ಭಟ್ಕಳ : ತಾಲೂಕಿನ ಮುರುಡೇಶ್ವರದಲ್ಲಿ RNS ಪ್ರಥಮ ದರ್ಜೆ ಕಾಲೇಜು ವತಿಯಿಂದ ಇಂದು ನಶೆಮುಕ್ತ ಭಾರತ ಅಭಿಯಾನ 2025 ಮತ್ತು ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಪ್ರೊ. ದಿನೇಶ್ ಆಚಾರ್ಯ ಮುಖ್ಯಸ್ಥರು ಆಟೋಮೊಬೈಲ್ ವಿಭಾಗ ಆರ್ ಎನ್ ಎಸ್ ರೂರಲ್ ಪಾಲಿಟೆಕ್ನಿಕ್ರವರು ಮಾತನಾಡಿ ಕೆಲಕಾಲ ಮಾದಕ ವಸ್ತುವನ್ನು ಬಳಸುವುದರಿಂದ ತಾತ್ಕಾಲಿಕ ತೃಪ್ತಿ ಅಥವಾ ಉಲ್ಲಾಸ ದೊರಕಬಹುದು. ಆದರೆ, ದೀರ್ಘಾವಧಿಯಲ್ಲಿ ಬಹುಮಾನ್ಯ ಹಾನಿಯುಂಟಾಗುತ್ತದೆ ಇದನ್ನು ಅರಿತುಕೊಂಡು ಶಿಸ್ತಿನ ಜೀವನ ನಡೆಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆಚಾರ್ಯರರಾದ ಡಾ. ಶಾಂತ ಶ್ರೀ ಹರಿದಾಸ ರವರು ಮಾತನಾಡಿ ತಾತ್ಕಾಲಿಕ ಸಂತೋಷವು ದೀರ್ಘಾವಧಿಯ ನೋವನ್ನು ತರುತ್ತದೆ, ಅದನ್ನು ದೂರವಿಡುವುದು ಉತ್ತಮ. ಮಾದಕ ವಸ್ತುಗಳಿಂದ ದೂರವಿರುವುದು ಆರೋಗ್ಯಕರ, ಸಫಲ, ಸಂತುಷ್ಟ ಜೀವನದ ಮಾರ್ಗವಾಗಿದೆ ಎಂದರು.

ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿಗಳಾದ ಗಣಪತಿ ಕಾಯ್ಕಿಣಿ ಮಾತನಾಡಿ ನಶೆ ಎನ್ನುವುದು ಪ್ರಾರಂಭದಲ್ಲಿ ಸುಖವನ್ನು ನೀಡಿದರೆ, ಕೆಲವೇ ದಿನಗಳಲ್ಲಿ ನಮ್ಮನ್ನು ಆಕ್ರಮಿಸಿ ಸಾವನ್ನ ತರುತ್ತದೆ . ಮಾನವ ಜನ್ಮವನ್ನು ಹಾಳು ಮಾಡಿಕೊಳ್ಳಬಾರದು ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಅತಿ ಮುಖ್ಯ ಎಂದರು.

ವೇದಿಕೆಯಲ್ಲಿ ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಗಣೇಶ್ ನಾಯ್ಕ್ ಹಾಜರಿದ್ದರು, ಉಪನ್ಯಾಸಕಿ ಮಮತಾ ಮರಾಠಿ ಕಾರ್ಯಕ್ರಮಗಳು ನಿರೂಪಿಸಿ ಎಲ್ಲರನ್ನ ಸ್ವಾಗತಿಸಿದರು.

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ ಶಕ್ತಿಗಳು ಇದನ್ನು ಬಳಸಿಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆಸಿವೆ ಎಂದು ವಿಶ್ವೇಶ್ವರ ಹೆಗಡೆ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ನಡೆಯಬಾರದ ದುರಂತವೊoದು ಸಂಭವಿಸಿದ್ದು, ಈ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಕುಮಟಾ: ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅತ್ಯಂತ ವಿಜೃಂಭಣೆಯಿoದ ನೆರವೇರಿತು....

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...