ಭಟ್ಕಳ: ತಾಲೂಕಿನ ಮುಂಡಳ್ಳಿಯ ನೀರಗದ್ದೆಯಲ್ಲಿ ಇತ್ತಿಚೆಗೆ ನಡೆದ ಎಮ್ಮೆ ಕಡಿದು ತಲೆ ಎಸೆದು ಹೋದ ಪ್ರಕರಣದಲ್ಲಿ ಎ-1 ಆರೋಪಿಯಾಗಿದ್ದ ಅಬ್ದುಲ್ ಅಲಿಂ ನನ್ನು ಅವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ನಂತರ ಒಂದೂವರೆ ತಿಂಗಳಿನಿoದ ಆರೋಪಿ ತಲೆಮರೆಸಿಕೊಂಡಿದ್ದನು.
ಶೋಧ ಕಾರ್ಯಾಚರಣೆ ಮುಂದುವರಿಸಿದ ಪೊಲೀಸರು, ಬೆಂಗಳೂರಿನ ಆರ್.ಟಿ. ನಗರದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ಭಟ್ಕಳಕ್ಕೆ ಕರೆತಂದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದಲ್ಲಿ ಬಳಸಲಾದ ಎರಡು ಬೈಕ್‌ಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಗಾಗಿ ಎಎಸ್‌ಐ ರಾಜೇಶ್ ಹಾಗೂ ನಾರಾಯಣ, ಸಿಬ್ಬಂದಿಯಾದ ಶ್ರೀಪಾದ ಮತ್ತು ವಿನೋದ ಕುಮಾರರನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು.
ವಿಸ್ಮಯ ನ್ಯೂಸ್, ಈಶ್ವರ ನಾಯ್ಕ ಭಟ್ಕಳ