Important

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತಾಲೂಕ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಮಾರುತಿ ಹರಿಕಂತ್ರ : ಕಾರ್ಯದರ್ಶಿಯಾಗಿ ಕಿರಣ ಗಾಂವಕರ

Share

ಅಂಕೋಲಾ: ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ (ಕರ್ನಾಟಕ ವರ್ಕಿಂಗ್ ಜರ್ನಲಿಸ್ಟ್ಸ್ ವೈಸ್ ) ಸಂಘಟನೆಯ ಅಂಕೋಲಾ ತಾಲ್ಲೂಕು ಘಟಕ ಅಸ್ತಿತ್ವಕ್ಕೆ ಬಂದಿದ್ದು ಜನಮಾಧ್ಯಮ ಪತ್ರಿಕೆಯ ಕರಾವಳಿ ವಿಭಾಗದ ಕಾರ್ಯನಿರ್ವಾಹಕ ಮಾರುತಿ ಹರಿಕಂತ್ರ ಅಧ್ಯಕ್ಷರಾಗಿ ಹಾಗೂ ವಿಕಾಸವಾಹಿನಿ ವರದಿಗಾರ ಕಿರಣ್ ಗಾಂವಕರ ಕಾರ್ಯದರ್ಶಿಯಾಗಿ ಆಯ್ಕೆಗೊಂಡಿದ್ದಾರೆ.

ಸಂಘಟನೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ಆದೇಶದ ಮೇರೆಗೆ ಕರಾವಳಿ ವಿಭಾಗದ ಉಸ್ತುವಾರಿ ಕುಮಾರ ನಾಯ್ಕ್ ಮತ್ತು ಜಿಲ್ಲಾಧ್ಯಕ್ಷ ನಾಗರಾಜ ದೈವಜ್ಞ ಅನುಮೋದನೆಯ ಮೇರೆಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಪತ್ರಕರ್ತರಾದ ವಿದ್ಯಾಧರ ಮೊರಬಾ, ವಿಲಾಸ ನಾಯಕ, ನಾಗರಾಜ ಶೆಟ್ಟಿ ಮತ್ತು ಸುಪ್ರಿಯಾ ನಾಯ್ಕ ಅವರನ್ನು ಒಳಗೊಂಡ ಸಂಘಟನೆಯು ರಚಿತವಾಗಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯು ರಾಜ್ಯ ಮಟ್ಟದಲ್ಲಿ ಪತ್ರಕರ್ತರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಪತ್ರಕರ್ತರ ಹಿತಾಸಕ್ತಿ ಮತ್ತು ಹಕ್ಕುಗಳ ರಕ್ಷಣೆಗಾಗಿ ಹಾಗೂ ವಸ್ತುನಿಷ್ಠ ವರದಿಗಾರಿಕೆಗೆ ಪ್ರೋತ್ಸಾಹಿಸುತ್ತದೆ.

ಈಗಾಗಲೇ ರಾಜ್ಯದ 27 ಜಿಲ್ಲೆಗಳಲ್ಲಿ ಸಂಘದ ಘಟಕಗಳಿದ್ದು, ಉತ್ತರ ಕನ್ನಡ ಜಿಲ್ಲೆಯ ಬೇರೆ ಬೇರೆ ತಾಲ್ಲೂಕು ಮಟ್ಟದಲ್ಲಿಯೂ ಸಂಘಟನೆ ಬಲವಾಗಿದೆ. ನೂತನ ಸಂಘಟನೆಯು ತಾಲ್ಲೂಕಿನ ಪತ್ರಕರ್ತರ ನೈಜ ಧ್ವನಿಯಾಗಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಕಾರ್ಯನಿರ್ವಹಣೆ ಮಾಡಲಿದೆ ಎಂದು ಸಂಘದ ಅಧ್ಯಕ್ಷ ಮಾರುತಿ ಹರಿಕಂತ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ ಶಕ್ತಿಗಳು ಇದನ್ನು ಬಳಸಿಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆಸಿವೆ ಎಂದು ವಿಶ್ವೇಶ್ವರ ಹೆಗಡೆ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ನಡೆಯಬಾರದ ದುರಂತವೊoದು ಸಂಭವಿಸಿದ್ದು, ಈ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಕುಮಟಾ: ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅತ್ಯಂತ ವಿಜೃಂಭಣೆಯಿoದ ನೆರವೇರಿತು....

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...