ಹೊನ್ನಾವರ: ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಹೊನ್ನಾವರದ ಕು. ದೀಕ್ಷಾ ಮಂಜುನಾಥ ನಾಯ್ಕ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಭಾರತ ಕಂಡ ಶ್ರೇಷ್ಠ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಮಾನೋತ್ಸವದ ಪ್ರಯುಕ್ತ ನಡೆದ ರಾಜ್ಯ ಮಟ್ಟದ ಆನ್ ಲೈನ್ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕಿನ ಹಡಿನಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ಕು. ದೀಕ್ಷಾ ಮಂಜುನಾಥ ನಾಯ್ಕ ಪ್ರಥಮ ಸ್ಥಾನಗಳಿಸಿದ್ದಾಳೆ.
ಶ್ರೀ ಬ್ರಹ್ಮಾನಂದ ಸರಸ್ವತಿ ಶ್ರೀಗಳ ಸೀಮೋಲ್ಲಂಘನ : ಗಮನಸೆಳೆದ ಬೃಹತ್ ಮೆರವಣಿಗೆ
ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಬಿ.ಎಲ್.ಸಂತೋಷ ರವರಿಂದ ಬಹುಮಾನ ಸ್ವೀಕರಿಸಿದ್ದಾಳೆ. ಪ್ರತಿಭಾನ್ವಿತ ವಿದ್ಯಾರ್ಥಿನಿಯಾದ ಕು.ದೀಕ್ಷಾ ಮಂಜುನಾಥ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಈಗಾಗಲೇ ಹಲವಾರು ಬಾರಿ ತಾಲ್ಲೂಕು ಮತ್ತು ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ.
ಈ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಸದಾನಂದ ಗೌಡ, ಬಿ.ಜೆ.ಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ನಾರಾಯಣ ಸ್ವಾಮಿ, ಶ್ರೀಮತಿ ತೇಜಸ್ವಿನಿ ಅನಂತಕುಮಾರ, ಆರ್ ಅಶೋಕ್ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಬಹುಮಾನವು ನಗದು, ಪ್ರಮಾಣಪತ್ರ ಮತ್ತು ಫಲಕಗಳನ್ನು ಒಳಗೊಂಡಿದೆ. ಈಕೆಯ ಈ ಸಾಧನೆಗೆ ಶಾಲಾ ಶಿಕ್ಷಕ ವೃಂದ, ಎಸ್.ಡಿ.ಎಂ.ಸಿಯವರು ಅಭಿನಂದಿಸಿದ್ದಾರೆ. ಇವಳು ಗುಡ್ಡೇಬಾಳ ಸ.ಹಿ.ಪ್ರಾ ಶಾಲೆ ಮುಖ್ಯ ಶಿಕ್ಷಕ ಜಿ.ಎಸ್.ಹೆಗಡೆ ಇವರಿಂದ ತರಬೇತಿ ಮತ್ತು ಮಾರ್ಗದರ್ಶನವನ್ನು ಪಡೆದಿದ್ದಾಳೆ.
ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ