ಬೆಂಗಳೂರು, ಆಗಸ್ಟ್ 27 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದಾಗಿ ರಾಜ್ಯಾದ್ಯಂತ ಆಗಸ್ಟ್ 31ರ ವರೆಗೂ ಮಳೆ ಅಬ್ಬರಿಸಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ಆಗಸ್ಟ್ 28 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಆಗಸ್ಟ್ 28 ಕ್ಕೆ ಆರೆಂಜ್ ಅಲರ್ಟ್: ಆಗಸ್ಟ್ 31ರ ವರೆಗೆ ಯೆಲ್ಲೋ ಅಲರ್ಟ್
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಆಗಸ್ಟ್ 28 ಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಆಗಸ್ಟ್ 31ರ ವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಬೀದರ್, ಕಲಬುರ್ಗಿ ಜಿಲ್ಲೆಗಳಿಗೂ ಆಗಸ್ಟ್ 28-29 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಸರ್ಕಾರಿ ಇಲಾಖೆಯ ಕಟ್ಟಡದ ಇಕ್ಕಟ್ಟಾದ ಗೋಡೆಗಳ ಮಧ್ಯೆ ಪತ್ತೆಯಾದ ಸೂಟ್ ಕೇಸ್ ! ? ಕೊನೆಗೂ ಸೂಟ್ಕೇಸ್ ರಹಸ್ಯ
ಭಾರೀ ಮಳೆಯಿಂದ ಗಣೇಶ ಚತುರ್ಥಿ ಆಚರಣೆಗೆ ಸ್ವಲ್ಪ ಅಡೆತಡೆಯಾಗಿದೆ. ಇನ್ನು ಮುರ್ನಾಲ್ಕು ದಿನಗಳ ಕಾಲ ಮಳೆ ಇರಲಿದ್ದು, ಗಣೇಶ ಚತುರ್ಥಿಯ ಸಂಭ್ರಮ-ಸಡಗರಕ್ಕೆ ಸ್ವಲ್ಪ ಹಿನ್ನಡೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಂಗಳವಾರದಿoದಲೇ ಮಳೆಯ ಅಬ್ಬರ ಜೋರಾಗಿದ್ದು, ಬುಧವಾರವೂ ಅಬ್ಬರಿಸಿದೆ.
ಗಣೇಶ ಮೂರ್ತಿ ವಿಸರ್ಜನೆಗೆ ಅಡ್ಡಿಪಡಿಸುವ ಸಾಧ್ಯತೆ
ಎಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಮಳೆರಾಯ ಕಿರಿಕಿರಿ ಮಾಡಿದ್ದು, ಸಡಗರಕ್ಕೆ ಅಡ್ಡಿಪಡಿಸಿದ್ದಾನೆ. ಮಳೆ ಇನ್ನು ಮುನಾಲ್ಕು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇರುವುದರಿಂದ ಗಣೇಶ ಮೂರ್ತಿ ವಿಸರ್ಜನೆಗೆ ಅಡ್ಡಿಪಡಿಸುವ ಸಾಧ್ಯತೆಯಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್