- ಪ್ರವಾಹದ ಭೀತಿ
- ತಗ್ಗು ಪ್ರದೇಶಗಳಿಗೆ ನೀರು
- ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹದ ಭೀತಿ ಹೆಚ್ಚಾಗಿದೆ. ತಗ್ಗು ಪ್ರದೇಶಗಳಿಗೆ ನೀರುನುಗ್ಗಿದ್ದು,ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಮಳೆಯ ತೀವ್ರತೆಗೆ ಅನುಗುಣವಾಗಿ ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಸ್ಥಳೀಯ ಬಿಇಓ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಅಂಕೋಲಾ ತಾಲೂಕಿನಲ್ಲಿ ಭಾರಿ ಮಳೆ: ಇಂದು ಶಾಲೆ-ಅಂಗನವಾಡಿಗಳಿಗೆ ರಜೆ
ಅಂಕೋಲಾ, ಆಗಸ್ಟ್ 29: ತಾಲೂಕಿನಲ್ಲಿ ನಿರಂತರ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಅಂಕೋಲಾ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು (29-08-2025) ಒಂದು ದಿನ ರಜೆ ಘೋಷಿಸಲಾಗಿದೆ.
ತಾಲೂಕಿನಲ್ಲಿ ಅನಿರೀಕ್ಷಿತ ಭಾರಿ ಮಳೆಯಾದ ಸಂದರ್ಭಗಳಲ್ಲಿ ತುರ್ತು ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ತಹಶೀಲ್ದಾರರಿಗೆ ನೀಡಲಾಗಿದೆ. ಅದರಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕೊರಿಕೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ರಜಾ ಅವಧಿ ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮಕ್ಕಳಿಗೆ ಯಾವುದೇ ಅನಾನುಕೂಲ ಉಂಟಾಗದಂತೆ ಶಾಲಾ-ಅಂಗನವಾಡಿ ನಿರ್ವಾಹಕರು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚಿಸಲಾಗಿದೆ.
ವಿಸ್ಮಯ ನ್ಯೂಸ್, ಕಾರವಾರ