ದಾಂಡೇಲಿ, ಆಗಸ್ಟ್ 29: ಬೈಕ್ ಕಳ್ಳತನಕ್ಕೆ ಸಂಬoಧಿಸಿದoತೆ ಪ್ರಕರಣದ ಜಾಡನ್ನು ಬೆನ್ನಟ್ಟಿದ್ದ ದಾಂಡೇಲಿ ನಗರ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಐವರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿದ ಘಟನೆ ನಡೆದಿದೆ. ನಗರದ ಹಳಿಯಾಳ ರಸ್ತೆಯ ಅಲೈಡ್ ಏರಿಯಾ ನಿವಾಸಿ ಹುಸೇನ್ ಸಾಬ ಅವರು ತಮ್ಮ ಬೈಕ್ ಕಳ್ಳತನವಾಗಿರುವ ಬಗ್ಗೆ ನಗರ ಠಾಣೆಗೆ ದೂರು ನೀಡಿದ್ದರು.

6 ದ್ವಿಚಕ್ರ ವಾಹನ ವಶಕ್ಕೆ
ಈ ಹಿನ್ನಲೆಯಲ್ಲಿ, ನಗರ ಠಾಣೆಯ ಪೊಲೀಸರು ಪ್ರಕರಣದ ಜಾಡನ್ನು ಬೆನ್ನಟ್ಟಿ ಐವರು ಅಂತರ್ ಜಿಲ್ಲಾ ಬೈಕ್ ಕಳ್ಳರ ಹೆಡೆಮುರಿ ಕಟ್ಟಿದ್ದಾರೆ. ಬಂಧಿತರೆಲ್ಲರೂ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ನಿವಾಸಿಗಳಾಗಿದ್ದಾರೆ. ಇವರಿಂದ ಒಟ್ಟು ಆರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬoಧಪಟ್ಟoತೆ, ಆರೋಪಿತರ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್.ಎಂ.ಎನ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಿಂಗನಮಕ್ಕಿ ಭರ್ತಿಗೆ ಒಂದು ಅಡಿ ಮಾತ್ರ ಬಾಕಿ : ಶರಾವತಿ ಕಣಿವೆಯಲ್ಲಿ ಭಾರೀ ಮಳೆ: ಪ್ರವಾಹದ ಅಪಾಯ ಹೆಚ್ಚಳ
ಹಳಿಯಾಳದಲ್ಲಿ ಬೀದಿನಾಯಿ ಆತಂಕ
ಹಳಿಯಾಳ: ರಸ್ತೆಯ ವಿನಾಯಕ ನಗರದಲ್ಲಿ ಬೀದಿ ನಾಯಿಗಳ ದಾಳಿಗೊಳಗಾಗಿ ಓರ್ವ ಬಾಲಕ ಸೇರಿದಂತೆ ಮೂವರಿಗೆ ಗಾಯವಾದ ಘಟನೆ ನಡೆದಿದೆ. ಸ್ಥಳೀಯ ನಿವಾಸಿ 11 ವರ್ಷದ ಬಾಲಕ ರೋಷನ್ ಜಮೀರ್, 19 ವರ್ಷದ ವಯಸ್ಸಿನ ಯುವತಿ ಆಶಿಕಾ ಮತ್ತು 70 ವರ್ಷ ವಯಸ್ಸಿನ ವೃದ್ಧ ಹುಸೇನ್ ಸಾಬ್ ಎಂಬವರು ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡಿದ್ದಾರೆ.
ಗಾಯಗೊಂಡ ಈ ಮೂವರನ್ನು ಚಿಕಿತ್ಸೆಗಾಗಿ ದಾಂಡೇಲಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಹಳಿಯಾಳ ರಸ್ತೆಯ ವಿನಾಯಕ ನಗರ ಸೇರಿದಂತೆ ನಗರದಲ್ಲೇಡೆ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ವ್ಯಾಪಕವಾಗುತ್ತಿದ್ದು, ಬೀದಿನಾಯಿಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್