ಹೊನ್ನಾವರ ಆಗಸ್ಟ್ 29: ತಾಲ್ಲೂಕಿನಲ್ಲಿ ನಿರಂತರ ಭಾರಿ ಮಳೆಯಾಗುತ್ತಿರುವುದು ಹಾಗೂ ಗೇರುಸೊಪ್ಪಾ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು 30-08-2025 (ಶನಿವಾರ) ರಂದು ಒಂದು ದಿನದ ರಜೆ ಘೋಷಿಸಲಾಗಿದೆ.
- ಹೊನ್ನಾವರ ತಾಲ್ಲೂಕಿನಲ್ಲಿ ನಿರಂತರ ಭಾರಿ ಮಳೆ
- ಗೇರುಸೊಪ್ಪಾ ಜಲಾಶಯದಿಂದ ಹೆಚ್ಚುವರಿ ನೀರು
- ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ತಹಶೀಲ್ದಾರರು ತುರ್ತು ಆದೇಶ
- 30-08-2025 (ಶನಿವಾರ) ರಂದು ಒಂದು ದಿನದ ರಜೆ ಘೋಷಣೆ
ತಹಶೀಲ್ದಾರರ ಆದೇಶದ ಪ್ರಕಾರ, ಹೊನ್ನಾವರ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಈ ಆದೇಶವನ್ನು ತಕ್ಷಣ ಜಾರಿಗೆ ತಂದು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ. ಈ ರಜೆಯನ್ನು ಮುಂದಿನ ದಿನಗಳಲ್ಲಿ ಪೂರಕವಾಗಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ವಿಸ್ಮಯ ನ್ಯೂಸ್, ವಿವೇಕ್ ಶೇಟ್ ಹೊನ್ನಾವರ