Important

ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡಿ: ಹೆಸ್ಕಾಂ ಅಧಿಕಾರಿಗೆ ಸಚಿವ ಮಂಕಾಳ ವೈದ್ಯ ತಾಕೀತು

Share

ಭಟ್ಕಳ: ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಿ.ಸಿ ಓಸಿ ಪ್ರಮಾಣ ಪತ್ರವಿಲ್ಲದಿದ್ದರು, ಜನರಿಗೆ ಪಂಚಾಯತ್ ನೀಡುವ ದೃಢಿಕರಣ ಪತ್ರವನ್ನು ಆಧರಿಸಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಒದಗಿಸಿಕೊಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಮೀನುಗಾರಿಕೆ ಹಾಗೂ ಬಂದರು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಸೂಚಸಿದರು.

ತಾಲೂಕಾ ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಕೆಲವೆ ದಿನಗಳಲ್ಲಿ ಎಲ್ಲಾ ಇಲಾಖೆಗೂ ನೇಮಕಾತಿ ಪಕ್ರಿಯೆ ಆರಂಭಿಸುತ್ತಿದ್ದು ಇನ್ನೂ ಮುಂದೆ ಸಿಬ್ಬಂಧಿಗಳ ಕೊರತೆ ಉದ್ಬವಿಸುವುದಿಲ್ಲ ಎಂದರು.

ಈ ಹಿಂದೆ ನಾನು ಶಾಸಕನಾಗಿದ್ದಾಗ ತಾಲೂಕಾ ಆಸ್ಪತ್ರೆಗೆ ವೈದ್ಯರನ್ನು ತಂದಿದ್ದು ಇದೀಗ ಕಳೆದ 6 ತಿಂಗಳಿನಿAದ ಸ್ತ್ರೀರೋಗ ತಜ್ಞರ ಕೊರತೆ ಇದೆ. ಆದಷ್ಟು ಬೇಗ ಸ್ತ್ರೀರೋಗ ತಜ್ಞರನ್ನು ಕರೆತರಲು ಪ್ರಯತ್ನಿಸುತ್ತೇನೆ. ಆಸ್ಪತ್ರೆಯಲ್ಲಿ ಟ್ರಾನ್ಸ್ ಫಾರ್ಮರ್ ಕೆಟ್ಟಿದ್ದು ಕೂಡಲೇ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಯಾವುದೇ ಒತ್ತಡಕ್ಕೆ ಒಳಗಾಗದೆ ಧೈರ್ಯವಾಗಿ ಕೆಲಸ ನಿರ್ವಹಿಸುವಂತೆ ಹೊಸ ವೈಧ್ಯಾಧಿಕಾರಿ ಡಾ. ಅರುಣ್ ಕುಮಾರವರಿಗೆ ಅಭಯ ನೀಡಿದರು.

ತಾಲೂಕಿನಲ್ಲಿ ಸಣ್ಣ ಹಿಡುವಳಿದಾರರು ಹೆಚ್ಚಾಗಿದ್ದು ಅಡಿಕೆಗೆ ಬರುವ ಕೊಳೆ ರೋಗಕ್ಕೆ ಸಹಾಯಧನ ಒದಗಿಸಿಕೊಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸರ್ವೆಕಾರ್ಯ ನಡೆಸಬೇಕು. ವಿದ್ಯಾರ್ಥಿ ನಿಲಯವನ್ನು ಅರಸಿ ಬರುವ ವಿದ್ಯಾರ್ಥಿಗಳಿಗೆ ವಾಪಾಸ್ಸು ಕಳುಹಿಸಬಾರದು. ಪರಸಭೆ ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿ ನಿಲಯಕ್ಕೆ ಪುರಸಭೆ ಅಧಿಕಾರಿಗಳು ತಿಂಗಳಿಗೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಲ್ಪಸಂಖ್ಯಾತ ಇಲಾಖೆಗೆ ಒಳಪಡುವ ವಸತಿ ನಿಲಯಗಳು ಸೇರಿದಂತೆ ಎಲ್ಲಾ ವಸತಿ ನಿಲಯಗಳು ಸ್ವಂತ ಕಟ್ಟಡ ಹೊಂದುವoತಾಗಬೇಕು ಎಂದರು.

ಪಟ್ಟಣದಲ್ಲಿ ಲೋಕೋಪಯೋಗಿ ಇಲಾಖೆ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸಿ.ಸಿ ರಸ್ತೆಯನ್ನು ಅಗ್ನಿಶಾಮಕ ದಳದ ಕಛೇರಿಯಿಂದ ಸಾಲು ಮರದ ತಿಮ್ಮಕ್ಕ ಪಾರ್ಕನವರೆಗಿನ ತಿರುವು ರಸ್ತೆಯನ್ನು ಸರಿಪಡಿಸಿ ನೇರ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದರು. ಕಂದಾಯ ಇಲಾಖೆ ಏಜೆಂಟರ ಇಲಾಖೆಯಾಗಿ ಮಾರ್ಪಡುತ್ತಿದ್ದು, ಎಲ್ಲಾ ಕೆಲಸವು ಏಜೆಂಟರ ಮೂಲಕ ಆಗುತ್ತಿದೆ. ಹೊಟೇಲ್, ಗನ್ ಮುಂತಾದವುಗಳ ಪರವಾನಿಗೆ ನವೀಕರಣಕ್ಕೆ ತಿಂಗಳುಗಟ್ಟಲೆ ಕಾಯಿಸಲಾಗುತ್ತಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.


ಸoತೆ ಮಾರುಕಟ್ಟೆಯಲ್ಲಿ ಪ್ರಾರಂಭವಾದ ಹೊಸ ಮೀನು ಮಾರುಕಟ್ಟೆಗೆ ಮೂಲಭೂತ ಸೌಕರ್ಯವನ್ನು ಹಾಗೂ ಸುತ್ತಮುತ್ತ ಆಧುನಿಕ ಮಾದರಿಯಲ್ಲಿ ಅಂಗಡಿ ಮುಂಗಟ್ಟುಗಳ ನಿರ್ಮಾಣ ಮಾಡುವಂತೆ, ಚೌಥನಿಯಲ್ಲಿರುವ 5 ಗುಂಟೆ ಜಾಗದಲ್ಲಿ ಹೊಸ ಮಿನು ಮಾರುಕಟ್ಟೆ ನಿರ್ಮಾಣ ಮಾಡುವಂತೆ ಪುರಸಭೆ ಅಧಿಕಾರಿಗಳಿಗೆ ತಿಳಿಸಿದರು.

ಮಕ್ಕಳ ಹಾಗೂ ಮಹಿಳಾ ಕಲ್ಯಾಣ ಅಭಿವೃದ್ಧಿ ಇಲಾಖೆಯಡಿಯಲ್ಲಿ ಬರುವ ತಾಲೂಕಿನಾದ್ಯಂತ ಇರುವ ಎಲ್ಲಾ ಅಂಗನವಾಡಿ ಶಾಲೆಗಳು ಸ್ವಂತ ಕಟ್ಟಡದಲ್ಲಿ ಕಾರ್ಯಚರಿಸಬೇಕು. ಮುರುಡೇಶ್ವರದ ದಿವಗೇರಿಯಲ್ಲಿ ಇನ್ನೂ ಬಾಡಿಗೆ ಕಟ್ಟಡದಲ್ಲಿ ಅಂಗವಾಡಿ ಶಾಲೆ ಕಾರ್ಯಚರಿಸುತ್ತಿದ್ದು ಆದಷ್ಟು ಬೇಗ ಸ್ವಂತ ಕಟ್ಟಡ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಜಾಗ ಗುರುತಿಸುವಂತೆ ಸಿಡಿ.ಪಿ.ಐ ಅಧಿಕಾರಿಗಳಿಗೆ ತಿಳಿಸಿದರು.

ವಿಸ್ಮಯ ನ್ಯೂಸ್ ಈಶ್ವರ ನಾಯ್ಕ ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...