ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ ನೀಡಲು ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಇದೇ ಡಿಸೆಂಬರ್ 21ರಂದು ವಿದ್ಯಾರ್ಥಿವೇತನ ಪರೀಕ್ಷೆಯನ್ನು ಆಯೋಜಿಸಲಾಗಿದೆ.
ಈ ವಿದ್ಯಾರ್ಥಿವೇತನ ಪರೀಕ್ಷೆ ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ, ಐಸಿಎಸ್‌ಇ , ಐಜಿಸಿಎಸ್‌ಇ, ಹಾಗೂ ಐಬಿ ಸೇರಿದಂತೆ ಎಲ್ಲ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ. ವಿವಿಧ ತರಗತಿಗಳ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ. ಶೈಕ್ಷಣಿಕ ಶ್ರೇಷ್ಠತೆಯನ್ನು ಉತ್ತೇಜಿಸುವುದು ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಗುಣಮಟ್ಟದ ವಸತಿ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ಈ ಉಪಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

ಆಸಕ್ತ ವಿದ್ಯಾರ್ಥಿಗಳು ಹಾಗೂ ಪೋಷಕರು ಮುಂಗಡವಾಗಿ ನೋಂದಣಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ, ಈ ವಿದ್ಯಾರ್ಥಿವೇತನ ಪರೀಕ್ಷೆ ಉಡುಪಿಯ ಕಿದಿಯೂರು ಹೋಟೆಲ್‌ನ ಶೇಷಶಯನ ಹಾಲ್‌ನಲ್ಲಿ ನಡೆಯಲಿದೆ. ಅರ್ಹತೆ ಹಾಗೂ ನೋಂದಣಿ ಕುರಿತು ಹೆಚ್ಚಿನ ಮಾಹಿತಿಗಾಗಿ ಪೋಷಕರು ಮತ್ತು ವಿದ್ಯಾರ್ಥಿಗಳು ಶಾಲಾ ಆಡಳಿತವನ್ನು ಸಂಪರ್ಕಿಸಬಹುದಾಗಿದೆ. 7795648500, 7795648501
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್











