Important

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

Share

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ (43) ನಿಧನನಾಗಿದ್ದಾನೆ. ಇತ್ತೀಚೆಗೆ ಕಾಡಿದ್ದ ಅನಾರೋಗ್ಯ ಸಮಸ್ಯೆಯಿಂದ ಮೊದಲು ಅವನನ್ನು ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈ ನಡುವೆ ಒಮ್ಮೆ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದ ಈತನನ್ನು, ತದನಂತರ ಮತ್ತೆ ಅದೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತಾದರೂ, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಬೆಳಗಿನ ಜಾವದಲ್ಲಿ ಕೊನೆಯುಸಿರೆಳೆದಿದ್ದಾನೆ.

ತಾಲೂಕಿನ ಹೆಸರಾಂತ ಫೋಟೋ ಸ್ಟುಡಿಯೋ ಒಂದರಲ್ಲಿ ಸಹಾಯಕನಾಗಿ ಅತ್ಯುತ್ತಮ ಫೋಟೋಗ್ರಾಫರ್ ಎನಿಸಿಕೊಂಡಿದ್ದ ಪ್ರಶಾಂತ ನಾಯ್ಕ,ತನ್ನ ಆತ್ಮೀಯ ವಲಯದಲ್ಲಿ ಪಚ್ಚು ಎಂದೇ ಚಿರ ಪರಿಚಿತನಾಗಿದ್ದ.ಊರಿನ ಹಾಗೂ ಸುತ್ತಮುತ್ತಲ ಅನೇಕ ಕಡೆಯ ಧಾರ್ಮಿಕ, ಸಾಂಸ್ಕೃತಿಕ, ಕ್ರೀಡೆ ಮತ್ತಿತರ ಕಾರ್ಯಗಳಲ್ಲಿಯೂ ತನ್ನ ಕೈಲಾದ ಸಹಕಾರ ಸೇವೆ ನೀಡುತ್ತಾ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿ ಬಾಳಿ ಬದುಕಿದ್ದ. ತನ್ನ ಹಾಸ್ಯ ಮಿಶ್ರಿತ ಶೈಲಿಯ ಮಾತುಗಾರಿಕೆ ಮೂಲಕ ತನ್ನ ನೋವು ಹಾಗೂ ಸಂಕಟ ಮರೆತು ಇತರರನ್ನು ನಗಿಸುತ್ತಿದ್ದ. ಕೆಲ ತುರ್ತು ಸಂದರ್ಭಗಳಲ್ಲಿ ಇತರರ ಪಾಲಿಗೆ ಆಪತ್ಬಾಂಧವನಂತಿದ್ದ ಪಚ್ಚು , ತನ್ನ ತಂದೆ, ತಾಯಿ, ಸಹೋದರ , ಸಹೋದರಿಯರು ಸೇರಿದಂತೆ ಕುಟುಂಬ ವರ್ಗ ಸೇರಿದಂತೆ ಅಪಾರ ಬಂಧು ಬಳಗ, ಮತ್ತು ಗೆಳೆಯರ ಬಳಗ ತೊರೆದಿದ್ದು , ಆತನ ಅಗಲುವಿಕೆ ನೋವು ಕೇವಲ ಕುಟುಂಬಕ್ಕಷ್ಟೇ ಅಲ್ಲದೇ ಊರಿನಲ್ಲಿ ಮತ್ತು ಗೆಳೆಯರ ಬಳಗದಲ್ಲಿ ಶೋಕದ ವಾತಾವರಣ ಮೂಡಿಸಿದೆ.

ಶಾಸಕ ಸತೀಶ ಸೈಲ್ ಸೇರಿದಂತೆ ತಾಲೂಕಿನ ಕೆಲಗಣ್ಯರು,ಸಮಾಜದ ಹಾಗೂ ಊರಿನ ಪ್ರಮುಖರು ,ಗೆಳೆಯರ ಬಳಗ ಮತ್ತಿತರರು ಪಚ್ಚು ಅಕಾಲಿಕ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಶ್ರೀ ದೇವರು ,ಅವನ ಕುಟುಂಬಕ್ಕೆ ಅಗಲುವಿಕೆಯ ದುಃಖ ಸಹಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ. ಮಂಗಳೂರಿನಿಂದ ಮೃತ ದೇಹವನ್ನು ಮನೆಗೆ ತರಲಾಗುತ್ತಿದ್ದು, ಇಂದು ( ಮಾ 20 ರ ಶುಕ್ರವಾರ) ಮಧ್ಯಾಹ್ನ 1 – 15 ರ ನ ನಂತರ ತಲುಪುವ ನಿರೀಕ್ಷೆ ಇದೆ. ಬಳಿಕ ಕೋಟೆವಾಡದ ಹಿಂದೂ ಸ್ಮಶಾನ ಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್ ರವರು ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ’ ದಲ್ಲಿ ಹೇಳಿದರು....

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ ಟಿ.ವಿ ಹೆಸರನ್ನು ಕೆಲವರು ದುರ್ಬಳಕೆ ಮಾಡುತ್ತಿರುವ ಬಗ್ಗೆ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಇತ್ತೀಚೆಗೆ,...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...